ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಕಾನೂನು ಕಾಲೇಜಿಗೆ ಪ್ರಸ್ತಾವನೆ: ವೆಂಕಟೇಶ್

Rashmi Kasaragodu
Updated On : 21 Feb 2014, 1:17 am

ಪಿರಿಯಾಪಟ್ಟಣ: ತಾಲೂಕಿನಲ್ಲಿ ಸರ್ಕಾರಿ ಕಾನೂನು ಕಾಲೇಜು ತೆರೆಯಲು ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಶಾಸಕ ಕೆ. ವೆಂಕಟೇಶ್ ಹೇಳಿದರು.
ತಾಲೂಕಿನ ಹರವೆ ಮಲ್ಲರಾಜು ಪಟ್ಟಣ ಗ್ರಾಮದಲ್ಲಿ 20 ಲಕ್ಷ ವೆಚ್ಚದ ಕುಡಿಯುವ ನೀರು ಸರಬರಾಜು ಯೋಜನೆಯ ಕಾಮಗಾರಿಗೆ ಗುರುವಾರ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು, ಕಾನೂನು ಕಾಲೇಜು ತಾಲೂಕಿನಲ್ಲಿ ಪ್ರಾರಂಭವಾದಲ್ಲಿ ಕೇವಲ ತಾಲೂಕಿನ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ, ಅಕ್ಕಪಕ್ಕದ ತಾಲೂಕಿನ ವಿದ್ಯಾರ್ಥಿಗಳಿಗೂ ಅನುಕೂಲವಾಗಲಿದೆ ಎಂದು ತಿಳಿಸಿದರು.
ತಾಲೂಕಿನ ಸಮಗ್ರ ಅಭಿವೃದ್ಧಿಯೇ ತಮ್ಮ ಗುರಿಯಾಗಿದ್ದು, ತಾಲೂಕಿನಲ್ಲಿರುವ ರಸ್ತೆಗಳ ಅಭಿವೃದ್ಧಿ ಹಾಗೂ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಮುಂದಿನ ಎರಡು ವರ್ಷಗಳಲ್ಲಿ ತಾಲೂಕಿನ ಎಲ್ಲ ರಸ್ತೆಗಳ ದುರಸ್ತಿ ಕಾರ್ಯಕ್ಕೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಲಕ್ಷ್ಮೇಗೌಡ, ಎಪಿಎಂಸಿ ಅಧ್ಯಕ್ಷ ಹೊಲದಪ್ಪ, ಗ್ರಾಪಂ ಮಾಜಿ ಅಧ್ಯಕ್ಷ ಅನಿಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾನ್ಸೂನ್ ಚಂದ್ರು, ಪ್ರಧಾನ ಕಾರ್ಯದರ್ಶಿ ನಿಲಂಗಾಲ ಜಯಣ್ಣ, ಮುಖಂಡರಾದ ಪಿ. ಮಹದೇವ್, ಎಚ್.ಡಿ. ಮೋಹನ್, ಬಾಬುಸಿಂಗ್, ಶಿವಶಂಕರ್, ಆರ್.ಶಿವಶಂಕರ್, ಪಿ.ಸಿ.ಕೃಷ್ಣ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement