ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ದಲಿತ ಸಾಹಿತ್ಯ ಸಮ್ಮೇಳನ ಮುಂದಕ್ಕೆ

Rashmi Kasaragodu
Updated On : 21 Feb 2014, 1:19 am

ಮೈಸೂರು: ಮಾರ್ಚ್ 1, 2ರಂದು ಮೈಸೂರಿನಲ್ಲಿ ಏರ್ಪಡಿಸಿದ್ದ 5ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿದೆ ಎಂದು ದಸಾಪ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಕೆ. ಪುಟ್ಟನಂಜಯ್ಯ ತಿಳಿಸಿದ್ದಾರೆ. ದಸಾಪ ಸಹಯೋಗದಲ್ಲಿ ಈ ಸಮ್ಮೇಳನ ನಡೆಸಲು ಸಂಸದ ಧ್ರುವನಾರಾಯಣ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ತೀರ್ಮಾನಿಸಲಾಗಿತ್ತು. ಆದರೆ ಕಾರಣಾಂತರದಿಂದ ಆ ದಿನದಂದು ನಡೆಸಲು ಸಾಧ್ಯವಾಗುತ್ತಿಲ್ಲ. ಲೋಕಸಭಾ ಚುನಾವಣೆ ಮುಗಿದ ನಂತರ ಸಮ್ಮೇಳನ ಆಯೋಜಿಸಲಾಗುವುದು. ಮುಂದಿನ ದಿನಾಂಕ ಪ್ರಕಟಿಸಲಾಗುವುದು ಎಂದಿದ್ದಾರೆ.
ಕವಿ ಸಮ್ಮೇಳನಕ್ಕೆ ಕವನ ಆಹ್ವಾನ
ಮೈಸೂರು: ಹುಣಸೂರಿನ ಸ್ಪಂದನ ಸಾಂಸ್ಕೃತಿಕ ಪರಿಷತ್ ಹಾಗೂ ರಾಜ್ಯ ಮಕ್ಕಳ ಸಾಹಿತ್ಯ ವೇದಿಕೆಯು ಕುವೆಂಪು ಸ್ಮರಣಾರ್ಥ ರಾಜ್ಯ ಮಟ್ಟದ ಚುಟುಕು ಕವಿಮೇಳವನ್ನು ಪಟ್ಟಣದ ರೋಟರಿ ಭವನದಲ್ಲಿ ಆಯೋಜಿಸಿದೆ. ಮಾರ್ಚ್ನಲ್ಲಿ ನಡೆಯುವ ಸಮ್ಮೇಳನಕ್ಕೆ ಆಸಕ್ತ ಕವಿ- ಕವಯತ್ರಿಯರು ತಮ್ಮ  ಆರು ಸಾಲಿನ ಮಿತಿಯೊಳಗಿನ ಐದು ಚುಟುಕು ಅಥವಾ ಹನಿಗವನಗಳನ್ನು ಕಳುಹಿಸಬಹುದು. ಕವನಗಳು ಸ್ವರಚಿತವಾಗಿರಬೇಕು. ಕವಿ ಸಮ್ಮೇಳನದಲ್ಲಿ ಕವನ ವಾಚನಕ್ಕೆ ಅವಕಾಶ ಕಲ್ಪಿಸಲಾಗುವುದು. ಆಸಕ್ತರು ಫೆ.28ರೊಳಗೆ ಟಿ. ಲೋಕೇಶ್, ಅಧ್ಯಕ್ಷರು, ಸ್ಪಂದನ ಸಾಂಸ್ಕೃತಿಕ ಪರಿಷತ್, ಎಲ್ಐಜಿ 38, ಕೆಎಚ್ಬಿ 2, ಕಲ್ಕುಣಿಕೆ, ಹುಣಸೂರು ಪಟ್ಟಣ- 05 ಇಲ್ಲಿಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ ಮೊ. 9880264678, 9980750100 ಸಂಪರ್ಕಿಸಿರಿ.
ಬಂಜಾರ ನಿಗಮ ಅಭಿನಂದನೆ
ಮೈಸೂರು: ಈ ಸಾಲಿನ ಬಜೆಟ್ನಲ್ಲಿ ಕರ್ನಾಟಕ ಬಂಜಾರ ತಾಂಡಾ ಅಭಿವೃದ್ಧಿ ನಿಗಮದ ಪ್ರಾದೇಶಿಕ ಉಪಕಚೇರಿಯನ್ನು ಮೈಸೂರಿಗೆ ಕೊಡುಗೆಯಾಗಿ ನೀಡಿರುವುದಕ್ಕೆ ಹಾಗೂ ಬಂಜಾರ ಸೇವಾ ಸಂಘದ ಸಮುದಾಯ ಭವನ ನಿರ್ಮಾಣಕ್ಕೆ ಆರ್ಥಿಕ ನೆರವು ಒದಗಿಸಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭಾರತ್ ಬಂಜಾರ ಸೇವಾಲಾಲ್ ಸೇನೆಯ ಜಿಲ್ಲಾಧ್ಯಕ್ಷ ಎಚ್.ಎಲ್.ಬಸವರಾಜ ನಾಯ್ಕ ಹಾಗೂ ಪ್ರಧಾನ ಕಾರ್ಯದರ್ಶಿ ಎಚ್. ರಮೇಶ್ ನಾಯ್ಕ ಅಭಿನಂದಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement