ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಮಾ. 1, 2ರಂದು ಟಿ. ನರಸೀಪುರದಲ್ಲಿ ಉತ್ಸವ

Rashmi Kasaragodu
Updated On : 21 Feb 2014, 1:16 am

ಟಿ. ನರಸೀಪುರ: ಪಟ್ಟಣದ ಎಪಿಎಂಸಿ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಎರಡು ದಿನಗಳ ಕಾಲ ಬೃಹತ್ ಕೃಷಿ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಉತ್ಸವ ಸಮಿತಿ ಅಧ್ಯಕ್ಷ ಹೊನ್ನನಾಯ್ಕ ಹೇಳಿದರು.
ಪಟ್ಟಣದ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಗುರುವಾರ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಕೃಷಿ ಕ್ಷೇತ್ರದಲ್ಲಿ ಅಭಿವೃದ್ಧಿಪಡಿಸಿದ ಆಧುನಿಕ ತಂತ್ರಜ್ಞಾನವನ್ನು ರೈತರಿಗೆ ತಿಳಿಸಲು ಮಾ. 1, 2ರಂದು ಕೃಷಿ ಉತ್ಸವ ಹಮ್ಮಿಕೊಳ್ಳಲಾಗಿದೆ. ರೈತರಲ್ಲಿ ಆತ್ಮವಿಶ್ವಾಸ ವೃದ್ಧಿಸುವ ಮುಖ್ಯ ಉದ್ದೇಶ ಉತ್ಸವದ ಹಿಂದಿದೆ ಎಂದರು.
ಈ ಉತ್ಸವದಲ್ಲಿ ವಾಟಾಳು ಮಠದ ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸಪ್ರಸಾದ್, ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಸಂಸದ ಧ್ರುವನಾರಾಯಣ, ಗ್ರಾಮಾಭಿವೃದ್ಧಿ ಯೋಜನೆ ಪ್ರಾದೇಶಿಕ ನಿರ್ದೇಶಕ ಎ. ಶ್ರೀಹರಿ, ವಿಧಾನ ಪರಿಷತ್ ಸದಸ್ಯ ಆರ್. ಧರ್ಮಸೇನಾ, ಜಿಪಂ ಅಧ್ಯಕ್ಷ ಎಂ. ಮಹದೇವ್, ತಾಪಂ ಅಧ್ಯಕ್ಷ ಚಿದರವಳ್ಳಿ ನಟರಾಜು ಭಾಗವಹಿಸುವುದಾಗಿ ಹೇಳಿದರು.
ಗೌರವ ಸಲಹೆಗಾರ ಹಾಗೂ ಜಿಪಂ ಮಾಜಿ ಅಧ್ಯಕ್ಷ ಎಸ್.ಎನ್. ಸಿದ್ದಾರ್ಥ ಮಾತನಾಡಿ, ಕೃಷಿ ಉತ್ಸವದ ಪ್ರಯೋಜನವನ್ನು ತಾಲೂಕಿನ ರೈತರು ಪಡೆದುಕೊಳ್ಳುವಂತೆ ಮನವಿ ಮಾಡಿದರು. ಸಭೆಯಲ್ಲಿ ಉತ್ಸವ ಸಮಿತಿ ಗೌರವಾಧ್ಯಕ್ಷ ಶಂಕರ್ಗುರು, ಗ್ರಾಮಾಭಿವೃದ್ಧಿ ಯೋಜನಾ ನಿರ್ದೇಶಕ ಮಹಾಬಲ್ ಕುಲಾಲ್, ಯೋಜನಾಧಿಕಾರಿ ಮೋಹನ್ನಾಯ್ಕ, ವಿಚಾರವಾದಿ ಕೆ.ಎನ್. ಪ್ರಭುಸ್ವಾಮಿ, ಮುತ್ತಲವಾಡಿ ಗ್ರಾಪಂ ಅಧ್ಯಕ್ಷ ಡಿ. ಶಿವು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement