ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ವಿಮಾನ ನಿಲ್ದಾಣಕ್ಕೆ ಒಡೆಯರ್ ಹೆಸರಿಡಿ

Rashmi Kasaragodu
Updated On : 21 Feb 2014, 1:19 am

ಮೈಸೂರು: ರಾಜವಂಶಸ್ಥ ದಿ. ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಹೆಸರನ್ನು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಇಡಬೇಕು ಎಂದು ಮಾಜಿ ಶಾಸಕ ಎಚ್.ಎಸ್. ಶಂಕರಲಿಂಗೇಗೌಡ ಆಗ್ರಹಿಸಿದ್ದಾರೆ.  
ಪಾರಂಪರಿಕ ನಗರ ಮೈಸೂರಿನ ಅಭಿವೃದ್ಧಿಗೆ ವಿಶೇಷ ಕೊಡುಗೆ ನೀಡಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಜಯಚಾಮರಾಜೇಂದ್ರ ಒಡೆಯರ್ ಮುಂತಾದ ರಾಜ ಮಹಾರಾಜ ಸೇವೆ ಸ್ಮರಣೀಯ. ಆ ಸಾಲಿನ ಕಡೆ ಯುವರಾಜ ಹಾಗೂ ಮಾಜಿ ಸಂಸದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಹೆಸರನ್ನು ಶಾಶ್ವತಗೊಳಿಸಲು ಸರ್ಕಾರ ಮುಂದಾಗಬೇಕು ಎಂದಿದ್ದಾರೆ.
ಆಚರಣೆ: ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅಭಿಮಾನಿಗಳ ಸಂಘದ ವತಿಯಿಂದ ಕೆ.ಆರ್ ವೃತ್ತದಲ್ಲಿ ಗುರುವಾರ ಹುಟ್ಟುಹಬ್ಬ ಆಚರಿಸಿದ ಮುಖಂಡರು, ಸಾರ್ವಜನಿಕರಿಗೆ ಸಿಹಿ ಹಂಚಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement