ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಆಸ್ಪತ್ರೆ ಕಾಮಗಾರಿಗೆ ಇಂದು ಚಾಲನೆ

Rashmi Kasaragodu
Updated On : 22 Feb 2014, 1:47 am


ಕೆ.ಆರ್. ನಗರ: ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ ಯೋಜನೆಯಡಿ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣ ಮಾಡಲಿರುವ 30 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡ ಕಾಮಗಾರಿಯ ಶಂಕುಸ್ಥಾಪನಾ ಸಮಾರಂಭವು ಫೆ. 22ರ ಮಧ್ಯಾಹ್ನ 3ಕ್ಕೆ ನಡೆಯಲಿದೆ.
ಕಂದಾಯ ಸಚಿವ ಶ್ರೀನಿವಾಸಪ್ರಸಾದ್ ಉದ್ಘಾಟಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಶಂಕುಸ್ಥಾಪನೆ ನೆರವೇರಿಸುವರು. ಶಾಸಕ ಸಾ.ರಾ. ಮಹೇಶ್ ಅಧ್ಯಕ್ಷತೆ ವಹಿಸುವರು. ಸಂಸದೆ ರಮ್ಯಾ ಸಮಾರಂಭ ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಜಿಪಂ ಅಧ್ಯಕ್ಷ ಎಂ.ಮಹದೇವ, ವಿಧಾನ ಪರಿಷತ್ ಸದಸ್ಯರಾದ ಸಿ.ಎಚ್. ವಿಜಯಶಂಕರ್, ಮರಿತಿಬ್ಬೇಗೌಡ, ಗೋ. ಮಧುಸೂದನ್, ಸಿದ್ದರಾಜು, ಎಸ್. ಸಂದೇಶ್ ನಾಗರಾಜು, ಆರ್.ಧರ್ಮಸೇನ, ಕೆ.ವಿ. ನಾರಾಯಣಸ್ವಾಮಿ ಭಾಗವಹಿಸುವರು.
ಬಾಲಕರ ವಿದ್ಯಾರ್ಥಿನಿಲಯ ಕಾಮಗಾರಿ: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯದ ನೂತನ ಕಟ್ಟಡದ ಶಂಕುಸ್ಥಾಪನಾ ಸಮಾರಂಭ ಫೆ.22ರ ಮಧ್ಯಾಹ್ನ 2.30ಕ್ಕೆ ಪಟ್ಟಣದಲ್ಲಿ ನಡೆಯಲಿದೆ. ಕಂದಾಯ ಸಚಿವ ಶ್ರೀನಿವಾಸಪ್ರಸಾದ್ ಭೂಮಿ ಪೂಜೆ ನೆರವೇರಿಸುವರು. ಶಾಸಕ ಸಾ.ರಾ. ಮಹೇಶ್ ಅಧ್ಯಕ್ಷತೆ ವಹಿಸುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement