ಇಂದು ಉದ್ಯೋಗ ಮೇಳ
ಮೈಸೂರು: ಕರ್ನಾಟಕ ರಾಜ್ಯ ಉದ್ಯೋಗ ಮತ್ತು ತರಬೇತಿ ಇಲಾಖೆ, ಕಾರ್ಮಿಕ ಇಲಾಖೆ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ, ಕರ್ನಾಟಕ ಉದ್ಯೋಗ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ ಮತ್ತು ಜಿಲ್ಲಾಡಳಿತ ಮೈಸೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಫೆ. 23 ಹಾಗೂ 24ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಏರ್ಪಡಿಸಲಾಗಿದೆ. ಮೇಳದಲ್ಲಿ 200ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು, ಏಳನೇ ತರಗತಿ, ಎಸ್ಎಸ್ಎಲ್ಸಿ, ಪಿಯುಸಿ, ಐ.ಟಿ.ಐ, ಡಿಪ್ಲೋಮಾ, ಯಾವುದೇ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಆಸಕ್ತ ನಿರುದ್ಯೋಗ ಯುವಕ ಯುವತಿಯರು ಮೇಳದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಲು ಕೋರಲಾಗಿದೆ.
ಹೃದ್ರೋಗ ಆಸ್ಪತ್ರೆ ಶಂಕುಸ್ಥಾಪನೆ
ಮೈಸೂರು: ಜಯದೇವ ಹೃದ್ರೋಗ ಆಸ್ಪತ್ರೆಯ ಮೈಸೂರು ಘಟಕದ ನಿರ್ಮಾಣ ಕಾರ್ಯಕ್ಕೆ ಫೆ. 23ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಂಕುಸ್ಥಾಪನೆ ನೆರವೇರಿಸುವರು ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ತಿಳಿಸಿದ್ದಾರೆ. ಕೆ.ಆರ್.ಎಸ್ ರಸ್ತೆಯ ಪಿಕೆಟಿಬಿ ಆಸ್ಪತ್ರೆಯ ಆವರಣದಲ್ಲಿ ನಿರ್ಮಿಸಲು ಉದ್ದೇಶಿಸಿರುವ 350 ಹಾಸಿಗೆಯುಳ್ಳ ಈ ಆಸ್ಪತ್ರೆಯ ಶಂಕುಸ್ಥಾಪನೆ ಕಾರ್ಯಕ್ರಮವು ಅಂದು ಸಂಜೆ 5.30ಕ್ಕೆ ನಡೆಯಲಿದೆ. ಸಚಿವರಾದ ಶ್ರೀನಿವಾಸ ಪ್ರಸಾದ್, ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಮಹದೇವಪ್ಪ, ಮಹದೇವ ಪ್ರಸಾದ್, ಶಾಸಕ ವಾಸು , ಮೇಯರ್ ರಾಜೇಶ್ವರಿ, ಜಿಪಂ ಅಧ್ಯಕ್ಷ ಮಹದೇವು, ಸಂಸದರಾದ ವಿಶ್ವನಾಥ್, ಧ್ರುವನಾರಾಯಣ್ ಹಾಗೂ ರಮ್ಯಾ ಅತಿಥಿಗಳಾಗಿ ಪಾಲ್ಗೋಳ್ಳುವರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.