ಎಲ್ಲರಿಗೂ ಶಿಕ್ಷಣ ದೊರೆಯಬೇಕು: ವೆಂಕಟೇಶ್
ಪಿರಿಯಾಪಟ್ಟಣ: ಪ್ರತಿಯೊಬ್ಬರಿಗೂ ಶಿಕ್ಷಣ ದೊರಕುವಂತಾಗಬೇಕು ಎಂಬ ಉದ್ದೇಶದಿಂದ ಪ್ರತಿ ಹಳ್ಳಿಯಲ್ಲೂ ಅಂಗನವಾಡಿ ಕೇಂದ್ರ ಹಾಗೂ ಶಾಲೆಗಳನ್ನು ತೆರೆಯಲಾಗುತ್ತಿದೆ ಎಂದು ಶಾಸಕ ಕೆ. ವೆಂಕಟೇಶ್ ಹೇಳಿದರು.
ತಾಲೂಕಿನ ಕಾನೂರು ಗ್ರಾಮದಲ್ಲಿ 3 ಲಕ್ಷ ವೆಚ್ಚದ ಅಂಗನವಾಡಿ ಕೇಂದ್ರದ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಾಲೂಕಿನಾದ್ಯಂತ ಪ್ರತಿ ಹಳ್ಳಿಯಲ್ಲೂ ಅಂಗನವಾಡಿ ಕೇಂದ್ರ ಹಾಗೂ ಶಾಲೆ ತೆರೆಯಲಾಗುತ್ತಿದ್ದು, ಅವಶ್ಯಕ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದ್ದು, ಸರ್ಕಾರದ ಯೋಜನೆಗಳನ್ನು ಪ್ರತಿಯೊಬ್ಬರೂ ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.
ಎಪಿಎಂಸಿ ಅಧ್ಯಕ್ಷ ಕೆ. ಹೊಲದಪ್ಪ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಲಕ್ಷ್ಮಣೇಗೌಡ, ಪಪಂ ಅಧ್ಯಕ್ಷೆ ಗೌರಮ್ಮ, ತಾಪಂ ಮಾಜಿ ಅಧ್ಯಕ್ಷ ಗೋವಿಂದೇಗೌಡ, ಬೆಟ್ಟದಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಂಜಣ್ಣ ಕಾರ್ನಾಡ್, ಮುಖಂಡರಾದ ಪಾಂಡುರಂಗ, ಕರಿಗೌಡ, ನಜೀರ್ಸಾಬ್, ಕೃಷ್ಣೇಗೌಡ, ಮಹದೇವಸ್ವಾಮಿ ಇದ್ದರು.