ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಚಿಂತನ ಗೋಷ್ಠಿ

Rashmi Kasaragodu
Updated On : 22 Feb 2014, 1:44 am

ಮೈಸೂರು: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮೈಸೂರು ನಗರ ಘಟಕ ವತಿಯಿಂದ ಫೆ.23ರ ಸಂಜೆ 4.30ಕ್ಕೆ ಜೆಎಸ್‌ಎಸ್ ಆಸ್ಪತ್ರೆ ಆವರಣದಲ್ಲಿರುವ ರಾಜೇಂದ್ರ ಭವನದಲ್ಲಿ ಪ್ರಾಮಾಣಿಕತೆ ದೇಶದ ಇಂದಿನ ದೊಡ್ಡ ಅವಶ್ಯಕತೆ ವಿಷಯ ಕುರಿತು ಚಿಂತನ ಗೋಷ್ಠಿ ಆಯೋಜಿಸಲಾಗಿದೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ತೋಂಟದಾರ್ಯ ಹೇಳಿದರು.
ಗೋಷ್ಠಿಯನ್ನು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಉದ್ಘಾಟಿಸುವರು. ರಾಜ್ಯಸಭಾ ಸದಸ್ಯ ಬಸವರಾಜ ಪಾಟೀಲ್ ಸೇಡಂ ಅಧ್ಯಕ್ಷತೆ ವಹಿಸುವರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಜಕೀಯ ಕ್ಷೇತ್ರ ಪ್ರಾಮಾಣಿಕತೆ ಕುರಿತು ಮಾಜಿ ಸಚಿವ ಸಿ.ಎಚ್. ವಿಜಯಶಂಕರ್, ಸಾರ್ವಜನಿಕ ಕ್ಷೇತ್ರ ಪ್ರಾಮಾಣಿಕತೆ ಕುರಿತು ವಿವೇಕಾನಂದ ಯೂತ್ ಮೂವ್‌ಮೆಂಟ್ ಸಂಸ್ಥಾಪಕ ಡಾ.ಆರ್. ಬಾಲಸುಬ್ರಹ್ಮಣ್ಯಂ, ಸರ್ಕಾರಿ ಕ್ಷೇತ್ರದಲ್ಲಿ ಪ್ರಾಮಾಣಿಕತೆ ಕುರಿತು ಕೆಪಿಎ ಉಪ ನಿರ್ದೇಶಕಿ ಡಾ. ಧರಣಿದೇವಿ ಮಾಲಗತ್ತಿ, ಮಾಧ್ಯಮ ಕ್ಷೇತ್ರದಲ್ಲಿ ಪ್ರಾಮಾಣಿಕತೆ ಕುರಿತು ಪತ್ರಕರ್ತರ ರವೀಂದ್ರ ಭಟ್ಟ ತಮ್ಮ ಚಿಂತನೆಗಳನ್ನು ಹಂಚಿಕೊಳ್ಳುವರು.
ಪರಿಷತ್ತಿನ ಸಂಚಾಲಕ ನಾಗರಾಜ, ಕಾರ್ಯಕಾರಿ ಸದಸ್ಯರಾದ ಮಹದೇವಪ್ಪ, ಕುಮಾರಸ್ವಾಮಿ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments