ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಮಾನಸಿ ನಗರಕ್ಕೆ ಶೀಘ್ರ ಮೂಲಸೌಕರ್ಯ: ಜಿಟಿಡಿ

Rashmi Kasaragodu
Updated On : 22 Feb 2014, 1:46 am

ಮೈಸೂರು: ಮಾನಸಿನಗರಕ್ಕೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಶೀಘ್ರ ಕ್ರಮ ಕೈಗೊಳ್ಳುವುದಾಗಿ ಹಾಗೂ ಶಾಸಕರ ನಿಧಿಯಿಂದ ಬಸ್ ತಂಗುದಾಣ ನಿರ್ಮಿಸಿಕೊಡುವುದಾಗಿ ಚಾಮುಂಡೇಶ್ವರಿ ಕ್ಷೇತ್ರ ಶಾಸಕ ಜಿ.ಟಿ.ದೇವೇಗೌಡ ಭರವಸೆ ನೀಡಿದರು.
ನಗರದ ಬನ್ನೂರು ವರ್ತುಲ ರಸ್ತೆಯ ಸಮೀಪದ ಮಾನಸಿನಗರದಲ್ಲಿ ನಡೆದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪ್ರಥಮ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಂಘದ ಅಧ್ಯಕ್ಷ ಬೊಮ್ಮೇಗೌಡ ಅಧ್ಯಕ್ಷತೆ ವಹಿಸಿದ್ದರು. ಮಾನಸಿನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಡಿ.ಬಿ. ಲಿಂಗಣ್ಣಯ್ಯ ಮಾತನಾಡಿ, ನಗರದಲ್ಲಿ ಮೂಲಭೂತ ನಾಗರಿಕ ಸೌಲಭ್ಯಗಳಾದ ಕುಡಿಯುವ ನೀರು, ನಗರ ಬಸ್ ಸಂಚಾರ ವ್ಯವಸ್ಥೆ, ವಿದ್ಯುತ್ ಸಮಸ್ಯೆಗಳು ಹಾಗೂ ಹೊರ ವಲಯದಲ್ಲಿರುವುದರಿಂದ ಅಪರಾಧ ಮತ್ತು ಅನೈತಿಕ ಚಟುವಟಿಕೆಗಳನ್ನು ನಿಯಂತ್ರಿಸಬೇಕೆಂದು ಮನವಿ ಮಾಡಿದರು.  
ಮುಖ್ಯ ಅತಿಥಿಗಳಾಗಿ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಂಘದ ಅಧ್ಯಕ್ಷ ಮಹೇಶ್, ಡಿವೈಎಸ್ಪಿ ಶ್ರೀಹರಿ ಬರಗೂರು, ನಗರ ಸಾರಿಗೆ ಇಲಾಖೆಯ ಮಸೂರು ಅಹಮದ್, ನಗರಾಭಿವೃದ್ಧಿ ಪ್ರಾಧಿಕಾರದ 8ನೇ ವಲಯಾಧಿಕಾರಿ ಎಚ್.ಕೆ. ರಾಮಸ್ವಾಮಿ, 57ನೇ ವಾರ್ಡ್‌ನ ನಗರಪಾಲಿಕೆ ಸದಸ್ಯೆ ರಜನಿ ಅಣ್ಣಯ್ಯ, ಜೆಡಿಎಸ್ ಮುಖಂಡ ಮಾದೇಗೌಡ, ಕೆಪಿಟಿಸಿಎಲ್ ಅಧೀಕ್ಷಕ ಎಂಜಿನಿಯರ್ ಉಮೇಶ್ ಕುಮಾರ್, ರಮೇಶ್ ಕಳ್ಳಿಪಾಳ್ಯ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement