ಪಲ್ಸ್ ಪೋಲಿಯೊ ಜಾಗೃತಿ ಜಾಥಾ
ಚಾಮರಾಜನಗರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರೋಟರಿ ಸಂಸ್ಥೆ ವತಿಯಿಂದ ಎರಡನೇ ಸುತ್ತಿನ ಪಲ್ಸ್ ಪೋಲಿಯೊ ಅಂಗವಾಗಿ ನರ್ಸಿಂಗ್ ವಿದ್ಯಾರ್ಥಿಗಳಿಂದ ನಗರದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ಇಲ್ಲಿನ ಜಿಲ್ಲಾ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಪಲ್ಸ್ ಪೋಲಿಯೊ ಜಾಥಾಕ್ಕೆ ನಗರಸಭಾ ಅಧ್ಯಕ್ಷ ನಂಜುಂಡಸ್ವಾಮಿ ಚಾಲನೆ ನೀಡಿ ಮಾತನಾಡಿ, ಚಿಕ್ಕ ವಯಸ್ಸಿನ ಮಕ್ಕಳಲ್ಲಿ ಶಾಶ್ವತ ಅಂಗವಿಕಲತೆಗೆ ಕಾರಣವಾಗುವ ಪೋಲಿಯೊ ತಡೆಗೆ ಅಭಿಯಾನ ಮಾಡಲಾಗಿದ್ದು, ವಿವಿಧ ಸಂಘ ಸಂಸ್ಥೆಗಳ ಸಹಕಾರ ಅತ್ಯಗತ್ಯ ಎಂದು ತಿಳಿಸಿದರು. ರೋಟರಿ ಅಧ್ಯಕ್ಷ ಎಂ.ಕಮಲ್ರಾಜ್, ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಪಾಂಡುವಿಜಯನ್ ಮಾತನಾಡಿದರು. ಆರೋಗ್ಯಾಧಿಕಾರಿ ಡಾ.ಮಲ್ಲಿಕ್, ರೋಟರಿ ಕಾರ್ಯದರ್ಶಿ ಜಿ.ಗುರುಸ್ವಾಮಿ, ರೋ.ಡಾ. ನಾಗಾರ್ಜುನ್, ಆರ್.ಎಚ್. ವಿಶ್ವೇಶ್ವರಯ್ಯ, ಆರೋಗ್ಯ ಮತ್ತು ಶಿಕ್ಷಣ ಇಲಾಖೆಯ ಗೋವಿಂದನಾಯ್ಕ ಮತ್ತಿತರರು ಇದ್ದರು.