ಸಂಗೀತ ವಿವಿ ವ್ಯಾಪ್ತಿಗೆ ಸೀನಿಯರ್, ಜೂನಿಯರ್, ವಿದ್ವತ್ ಪರೀಕ್ಷೆ
ಮೈಸೂರು: ಈವರೆಗೆ ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ನಡೆಸುತ್ತಿದ್ದ ಸಂಗೀತ ಸೀನಿಯರ್, ಜೂನಿಯರ್ ಹಾಗೂ ವಿದ್ವತ್ ಪರೀಕ್ಷೆಗಳನ್ನು ಇನ್ನು ಮುಂದೆ ಅಂದರೆ 2015-16ನೇ ಸಾಲಿನಿಂದ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ನಡೆಸಲಿದೆ.