ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಸಿಎಚ್ವಿಗೆ ಟಿಕೆಟ್ ನೀಡಲು ಒತ್ತಾಯ

Rashmi Kasaragodu
Updated On : 25 Feb 2014, 2:19 am

ಮೈಸೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಥಳೀಯರಾದ ಮಾಜಿ ಸಚಿವ ಸಿ.ಎಚ್. ವಿಜಯಶಂಕರ್ ಅವರಿಗೆ ಟಿಕೆಟ್ ನೀಡಬೇಕು ಎಂದು ಬಿಜೆಪಿ ಸ್ಲಂ ಮೋರ್ಚಾ ನಗರ ಉಪಾಧ್ಯಕ್ಷ ಭಾಸ್ಕರ್ ಒತ್ತಾಯಿಸಿದರು.
ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಿಂದ ಸ್ಥಳೀಯರಿಗೆ ಮಾತ್ರ ಟಿಕೆಟ್ ನೀಡಬೇಕು. ರಾಜ್ಯ ಬಿಜೆಪಿ ನಾಯಕರಾದ ಡಿ.ವಿ. ಸದಾನಂದಗೌಡ ಮತ್ತು ಶೋಭಾ ಕರಂದ್ಲಾಜೆ ಅವರು ಸ್ಪರ್ಧಿಸಲು ಉತ್ಸುಕರಾಗಿದ್ದಾರೆ. ಆದರೆ ಸ್ಥಳೀಯರನ್ನು ಹೊರತುಪಡಿಸಿ ಹೊರಗಿನವರಿಗೆ ಟಿಕೆಟ್ ನೀಡಿದರೆ ನಾವು ಅದನ್ನು ವಿರೋಧಿಸುವುದಾಗಿ ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮೈಸೂರಿನಲ್ಲಿ ಬಹಳಷ್ಟು ಮಂದಿ ಸಮರ್ಥ ನಾಯಕರಿದ್ದಾರೆ. ಎರಡು ಬಾರಿ ಸಂಸದರಾಗಿ ಮತ್ತು ಒಮ್ಮೆ ವಿಧಾನಪರಿಷತ್ ಸದಸ್ಯರಾಗಿರುವ ಸಿ.ಎಚ್. ವಿಜಯಶಂಕರ್ ಅವರಿಗೆ ಟಿಕೆಟ್ ನೀಡಬೇಕು. ಈ ಸಂಬಂಧ ಕೋರ್ ಕಮಿಟಿಯಿಂದ ಶಿಫಾರಸ್ಸು ಮಾಡಲಾಗಿದೆ ಎಂದರು.
ಹೊರಗಿನ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದರೆ ಅವರು ಸ್ಥಳೀಯ ಕಾರ್ಯಕರ್ತರ ಕೈಗೆ ಸಿಗುವುದು ಅಸಾಧ್ಯವಾಗುತ್ತದೆ. ಸದ್ಯ ಮೈಸೂರು ಭಾಗದಲ್ಲಿ ಒಬ್ಬರೇ ಒಬ್ಬರು ಬಿಜೆಪಿ ಶಾಸಕರಿಲ್ಲ. ಈಗ ಹೊರಗಿನವರಿಗೆ ಟಿಕೆಟ್ ನೀಡಿ ಅವರೂಗೆದ್ದು ಹೋದರೆ ಅವರನ್ನು ನೋಡಲು ಬೆಂಗಳೂರಿಗೆ ಅಥವಾ ಪುತ್ತೂರಿಗೆ ಹೋಗಬೇಕಾಗುತ್ತದೆ. ಹೀಗಾಗಿ ಸ್ಥಳೀಯರಿಗೆ ಪ್ರಥಮ ಆದ್ಯತೆ ನೀಡಬೇಕು. ತಪ್ಪಿದರೆ ನಾವು ತಟಸ್ಥರಾಗಿ ಉಳಿಯುತ್ತೇವೆ ಎಂದು ಎಚ್ಚರಿಸಿದರು.
ಕಾರ್ಯಕಾರಿಣಿ ಸದಸ್ಯ ಯತಿರಾಜ್, ರಾಜೇಶ್, ರಾಜು, ಸೋಮಶೇಖರ್ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement