ಯೋಗೇಶ್ ಆಯ್ಕೆ
ಪಿರಿಯಾಪಟ್ಟಣ: ತಾಲೂಕಿನ ಪಂಚವಳ್ಳಿ ಗ್ರಾಪಂ ಉಪಾಧ್ಯಕ್ಷರಾಗಿ ಯೋಗೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಉಪಾಧ್ಯಕ್ಷರಾಗಿದ್ದ ರಾಣಿ ಅವರು ಆಂತರಿಕ ಒಪ್ಪಂದದಂತೆ ರಾಜಿನಾಮೆ ನೀಡಿದ ಹಿನ್ನೆಲೆಯಲ್ಲಿ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಿಗದಿಯಾಗಿತ್ತು. ಚುನಾವಣಾಧಿಕಾರಿಯಾಗಿ ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಹುಂಬಿ ಕಾರ್ಯ ನಿರ್ವಹಿಸಿದರು. ಗ್ರಾಪಂ ಅಧ್ಯಕ್ಷೆ ಚಿಕ್ಕಮ್ಮ, ಸದಸ್ಯರಾದ ವೆಂಕಟೇಶ್, ಮಹೇಶ್, ರಫೀಕ್, ನಯಿಮ್ಅಹಮದ್, ದೇವರಾಜ್, ಜಯಣ್ಣ, ಲೋಕೇಶ್, ರವಿ, ಮಲ್ಲಿಕಾರ್ಜುನ, ಪಿ.ವಿ. ರಾಜಶೇಖರ್, ಗೌರಮ್ಮ, ರಾಣಿ, ಗೌರಮ್ಮ, ಶಶಿರೇಖಾ, ವಸಂತಾ, ನಾಗಮ್ಮ, ನಂಜಮಣಿ, ಕಾಮಾಕ್ಷಿ ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.