ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಕರಕಂಠೇಶ್ವರ ಸ್ವಾಮಿಗೆ ವಿಶೇಷ ಪೂಜೆ

Rashmi Kasaragodu
Updated On : 28 Feb 2014, 1:11 am

ಪಿರಿಯಾಪಟ್ಟಣ: ತಾಲೂಕಿನ ಕಂಪಲಾಪುರ ಗ್ರಾಮದ ಶ್ರೀ ಕರಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶೀವರಾತ್ರಿ ಹಬ್ಬದ ಪ್ರಯುಕ್ತ ಗಣಪತಿ ಹಾಗೂ ಕರಕಂಠೇಶ್ವರಸ್ವಾಮಿ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು.
ಶ್ರೀ ಕರಕಂಠೇಶ್ವರ ಸ್ವಾಮಿಯ ವಿಗ್ರಹಕ್ಕೆ ಪಂಚಲೋಹದ ಗೊಳಗ, ಪ್ರಭಾವಳಿ ಹಾಗೂ ಗಣಪತಿ ವಿಗ್ರಹಕ್ಕೆ ಬೆಣ್ಣೆ ಅಲಂಕಾರ ಮಾಡಲಾಗಿತ್ತು. ಹಬ್ಬದ ಪ್ರಯುಕ್ತ ದೇವಾಲಯಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಹೆಚ್ಚಿದ್ದು, ಬೆಳಗ್ಗಿನಿಂದಲೆ ದೇವಾಲಯದಲ್ಲಿ ದೇವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.
ದೇವಸ್ಥಾನದ ಬಲಭಾಗದಲ್ಲಿರುವ ಅರಳಿಮರ ಹಾಗೂ ಬೇವಿನ ಮರಕ್ಕೆ ಸಾಂಪ್ರದಾಯಿಕವಾಗಿ ಮದುವೆ ಮಾಡಲಾಯಿತು. ಅಲ್ಲದೆ ಹೊಸದಾಗಿ ಕಟ್ಟಿರುವ ಅಶ್ವತ್ಥ ಕಟ್ಟೆಯನ್ನು ಸಾರ್ವಜನಿಕರ ಬಳಕೆಗೆ ಸಮರ್ಪಿಸಲಾಯಿತು. ದೇವಸ್ಥಾನದ ವತಿಯಿಂದ ಪ್ರಸಾದ ವಿನಿಯೋಗ ಮಾಡಲಾಯಿತು.
ಪಟ್ಟಣ ಸಮೀಪದ ಅಂಗನಹಳ್ಳಿ ಬಳಿಯ ಶ್ರೀ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಶಿವರಾತ್ರಿ ಪ್ರಯುಕ್ತ ರಥೋತ್ಸವ ನಡೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement