ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ದೊಡ್ಡಕೊಪ್ಪಲಿನಲ್ಲಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ

Mainashree
Updated On : 3 Jan 2014, 11:16 am

ಕೆ.ಆರ್. ನಗರ: ಕೆಲವು ಸರ್ಕಾರಿ ಶಾಲೆಗಳು ಇಂದಿಗೂ ಖಾಸಗಿ ಶಾಲೆಗಳಿಗೆ ಯಾವುದರಲ್ಲಿಯೂ ಕಡಿಮೆ ಇಲ್ಲದಂತೆ ಪೈಪೋಟಿ ಕೊಡುತ್ತಿವೆ ಎಂದು ತಾಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ನಾಗಣ್ಣ ಹೇಳಿದರು.
ಹೊಸ ಅಗ್ರಹಾರ ಹೋಬಳಿಯ ದೊಡ್ಡಕೊಪ್ಪಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ಶಿಕ್ಷಕರು ನೀಡಿದರೆ ಖಾಸಗಿ ಶಾಲೆಗಿಂತ ಹೆಚ್ಚು ಫಲಿತಾಂಶ ಬರುವುದರಲ್ಲಿ ಸಂದೇಹವಿಲ್ಲ ಎಂದ ಅವರು, ನಮ್ಮೂರ ಶಾಲೆಯಲ್ಲಿ ಒಳ್ಳೆಯ ಶಿಕ್ಷಕರ ತಂಡವಿದ್ದು ಶೇ.100ರಷ್ಟು ಫಲಿತಾಂಶ ಬರುವ ಭರವಸೆ ನನಗಿದೆ ಎಂದು ತಿಳಿಸಿದರು.
ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಣ ಸಂಯೋಜಕ ಟಿ.ನಾಗೇಶ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷೆ ಹೇಮಲತಾ ಮಂಜುನಾಥ್, ಮುಖ್ಯ ಶಿಕ್ಷಕ ಶಿವಪ್ಪ, ಸಹ ಶಿಕ್ಷಕರಾದ ಮಂಜುನಾಥ್, ಕುಸುಮ, ನಾಗರಾಜೇಗೌಡ, ಸಬಿನಾ, ಶಿವಮ್ಮ, ಚಂದ್ರಕಲಾ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement