ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ರಾಜ್ಯಪಾಲ ಸಂವಿಧಾನ ವಿರೋಧಿ: ಆರೋಪ

Mainashree
Updated On : 3 Jan 2014, 11:10 am

ಮೈಸೂರು: ಕುಲಾಧಿಪತಿಯಾಗಿರುವ ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಅವರು ಸಂವಿಧಾನ ಮತ್ತು ಮೀಸಲಾತಿ ವಿರೋಧಿ ಅನುಸರಿಸುತ್ತಿದ್ದಾರೆ ಎಂದು ನಾಯಕ ಹಿತರಕ್ಷಣಾ ಸಮಿತಿ, ಹಿಂದುಳಿದ ವರ್ಗಗಳ ವೇದಿಕೆ ಹಾಗೂ ಮಾಹಿತಿ ಹಕ್ಕು ಕಾಯಿದೆ ಕಾರ್ಯಕರ್ತರು ಆರೋಪಿಸಿದ್ದಾರೆ.
ಕರ್ನಾಟಕ ವಿವಿ ಕಾಯಿದೆ- 2000 ಸೆಕ್ಷನ್ 14(4)ರ ಪ್ರಕಾರ ಕರ್ನಾಟಕದ ವಿವಿಧ ವಿವಿಗಳಿಗೆ ಕುಲಪತಿಗಳನ್ನು ನೇಮಕ ಮಾಡುವಾಗ ಸಾಮಾಜಿಕ ನ್ಯಾಯ ರಿಗಣಿಸಬೇಕೆಂದು ಸ್ಪಷ್ಟವಾಗಿದೆ. ಆದರೆ ಈ ನಿಬಂಧನೆಗಳನ್ನು ರಾಜ್ಯಪಾಲರು ಉಲ್ಲಂಘಿಸಿದ್ದಾರೆ. ದಾವಣಗೆರೆ ವಿವಿಗೆ ಡಾ.ಗೋಮತಿದೇವಿ ಅವರನ್ನು ನೇಮಿಸದಿರುವುದು ಅವರ ನಿಲುವಿಗೆ ತಾಜಾ ಉದಾಹರಣೆಯಾಗಿದೆ ಎಂದು ನಾಯಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಬಿ.ಎಂ. ಸತೀಶ್ ನಾಯಕ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬೆಂಗಳೂರು ವಿವಿ, ಮೈಸೂರು ವಿವಿ, ಕರ್ನಾಟಕ ರಾಜ್ಯ ಮುಕ್ತ ವಿವಿಗೆ ಕುಲಪತಿಗಳನ್ನು ನೇಮಕ ಮಾಡುವಾಗ ಶೋಧನಾ ಸಮಿತಿ ಹಾಗೂ ಸರ್ಕಾರ ಎಸ್ಸಿ, ಎಸ್ಟಿ ಮತ್ತು ಇತರೆ ಹಿಂದುಳಿದ ವರ್ಗಕ್ಕೆ ಸೇರಿದ ಅರ್ಹ ಪ್ರಾಧ್ಯಾಪಕರ ಹೆಸರನ್ನು ಶಿಫಾರಸು ಮಾಡಿದ್ದರೂ ಅದನ್ನು ಲೆಕ್ಕಿಸದೆ ತಮಗೆ ಬೇಕಾದವರನ್ನು ನೇಮಿಸುವ ಮೂಲಕ ಸಂವಿಧಾನಕ್ಕೆ ಅಪಚಾರ ಎಸಗಿದ್ದಾರೆ. ಡಾ.ಗೋಮತಿದೇವಿ ಎಲ್ಲಾ ರೀತಿಯಿಂದಲೂ ಅರ್ಹತೆ ಹೊಂದಿದ್ದರೂ ಅವರಿಗೆ ಅನ್ಯಾಯ ಮಾಡಲಾಗಿದೆ. ಈ ಬಗ್ಗೆ ಮತ್ತೊಮ್ಮೆ ಪರಿಶೀಲಿಸಿ ಗೋಮತಿದೇವಿ ಅವರನ್ನು ನೇಮಿಸಲು ಕ್ರಮ ತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ರಾಜಭವನ ಚಲೋ: ರಾಜ್ಯಪಾಲರ ಸಂವಿಧಾನಬಾಹಿರ ನಡೆ ಖಂಡಿಸಿ ಸದ್ಯದಲ್ಲಿಯೇ ರಾಜಭವನ ಚಲೋ ಹಮ್ಮಿಕೊಳ್ಳಲಾಗುವುದು. ಅಲ್ಲದೇ ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳುವಂತೆ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಗುವುದು ಎಂದ ಅವರು, ರಾಜ್ಯಪಾಲರು ನಡೆಸಿರುವ ಎಲ್ಲಾ ಭ್ರಷ್ಟಾಚಾರವನ್ನು ಸಿಐಡಿ ತನಿಖೆಗೆ ಒಳಪಡಿಸುವಂತೆ ಒತ್ತಾಯಿಸಿದರು.
ಹೊನ್ನನಾಯಕ, ಸುಮಿತ್ರ, ವಿಶ್ವಕರ್ಮ ಮಹಾಸಭಾದ ಜಿಲ್ಲಾಧ್ಯಕ್ಷ ಸಿ.ಟಿ. ಆಚಾರ್ಯ, ಆರ್‌ಟಿಐ ಕಾರ್ಯಕರ್ತರಾದ ಜ್ಯೋತಿಪ್ರಕಾಶ್, ಪ್ರೊ.ಶೇಖರ್ ಎಸ್. ಅಯ್ಯರ್, ನಿವೃತ್ತ ಪ್ರಾಧ್ಯಾಪಕ ಎಂ.ಎನ್. ನಂಜುಂಡೇರಾಜೇ ಅರಸ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement