ಪಿಯು ಶುಲ್ಕ ಏರಿಕೆ: ಎಐಡಿಎಸ್ಒ ಖಂಡನೆ
ಮೈಸೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಅಂತ್ಯಕ್ಕೆ ಬರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮತ್ತು ಪದವಿಪೂರ್ವ ಮಂಡಳಿಯು ಶುಲ್ಕವನ್ನು ದಿಢರನೇ ಹೆಚ್ಚಿಸುವ ಮೂಲಕ ವಿದ್ಯಾರ್ಥಿಗಳಿಗೆ ಆಘಾತ ನೀಡಿವೆ ಎಂದು ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್ಒ) ಖಂಡಿಸಿದೆ.
ಶೈಕ್ಷಣಿಕ ವರ್ಷದ ಕೊನೆಯಲ್ಲಿ ಈ ಹೆಚ್ಚಳವನ್ನು ಜಾರಿಗೆ ತರಲು ಹೊರಟಿರುವುದು ಅತ್ಯಂತ ತರ್ಕಹೀನವಾಗಿದ್ದು ಈ ವಿದ್ಯಾರ್ಥಿ ವಿರೋಧಿ ನಿಲುವನ್ನು ನಮ್ಮ ಸಂಘಟನೆ ಖಂಡಿಸುತ್ತದೆ. ಸರ್ಕಾರ ಎಲ್ಲಾ ಡಿಡಿಪಿಯುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ಕಳುಹಿಸಿದ ಆದೇಶದ ಪ್ರಕಾರ ಪಿಯು ಕಾಲೇಜುಗಳಲ್ಲಿ ಬೋಧನಾ ಶುಲ್ಕ, ಪ್ರವೇಶ, ಪ್ರಯೋಗಾಲಯ ಮತ್ತು ಪರೀಕ್ಷಾ ಶುಲ್ಕವನ್ನು ಶೇ. 20 ರಿಂದ ಶೇ.33 ರವರೆಗೆ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಏರಿಸಲು ಆದೇಶಿಸಿದೆ ಎಂದು ಜಿಲ್ಲಾ ಸಮಿತಿಯ ಬಸವರಾಜ್ ತಿಳಿಸಿದ್ದಾರೆ. ಈ ಕೂಡಲೇ ಸರ್ಕಾರ ಆದೇಶ ಹಿಂಪಡೆಯಬೇಕು. ಇದರ ವಿರುದ್ಧ ವಿದ್ಯಾರ್ಥಿಗಳು ರಾಜ್ಯವ್ಯಾಪಿ ಹೋರಾಡಬೇಕು ಎಂದು ಅವರು ಕರೆ ನೀಡಿದ್ದಾರೆ.