ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಲೋಕಸಭಾ ಚುನಾವಣೆಯಲ್ಲಿ ಬಿಎಸ್ಪಿ ಸ್ವತಂತ್ರ ಸ್ಪರ್ಧೆ

Mainashree
Updated On : 6 Jan 2014, 10:32 am

ಮೈಸೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷವು ಸ್ವತಂತ್ರವಾಗಿ ರಾಜ್ಯದ 28 ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಹೇಳಿದರು.
ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ನಡೆಯುವ ಲೋಕಸಭಾ ಚುನಾವಣೆಗೆ ಪಕ್ಷ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಜೆಡಿಎಸ್, ಜೆಡಿಯು ಮತ್ತು ಬಿಎಸ್ಪಿ ಹೊಂದಾಣಿಕೆ ಮಾಡಿಕೊಳ್ಳುತ್ತವೆ ಎಂಬುದು ಸುಳ್ಳು. ಈ ಬಗ್ಗೆ ವರಿಷ್ಠರೊಂದಿಗೆ ಯಾವುದೆ ಚರ್ಚೆ ನಡೆದಿಲ್ಲ. ಆದ್ದರಿಂದ ನಾವು ಸ್ವತಂತ್ರವಾಗಿ ಎಲ್ಲಾ ಕ್ಷೇತ್ರದಲ್ಲಿಯೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ, ಕನಿಷ್ಠ ನಾಲ್ಕು ಕ್ಷೇತ್ರದಲ್ಲಿ ಜಯಗಳಿಸುವ ವಿಶ್ವಾಸ ಇದೆ ಎಂದು ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಜ.15 ರಂದು ಲಕ್ನೋದಲ್ಲಿ ನಡೆಯುವ ಬಹುಜನ ಸಮಾಜ ಪಕ್ಷದ ಬೃಹತ್ ರ್ಯಾಲಿಯಲ್ಲಿ ರಾಜ್ಯದಿಂದ ಒಂದು ಸಾವಿರ ಮಂದಿ ಭಾಗವಹಿಸುತ್ತಿದ್ದೇವೆ. ಇದೆ ವೇಳೆ ಮಾಯಾವತಿ ಅವರು ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಹೆಸರು ಪ್ರಕಟಿಸುವರು ಎಂದರು. ಬಗರ್  ಹುಕುಂ ಸಾಗುವಳಿ ಸಕ್ರಮಕ್ಕೆ ಸಂಬಂಧಿಸಿದಂತೆ ಹಾಗೂ ರಾಜ್ಯದಲ್ಲಿನ ಬಗರ್  ಹುಕುಂ ಸಾಗುವಳಿದಾರರಿಗೆ ಕೂಡಲೆ ಹಕ್ಕು ಪತ್ರ ನೀಡಬೇಕು ಎಂದು ಕಾಂಗ್ರೆಸ್ ಸರ್ಕಾರವನ್ನು ಒತ್ತಾಯಿಸಿ ಜ.30 ರಂದು ಎಲ್ಲಾ ತಾಲೂಕು ಕಚೇರಿಗಳ ಎದುರು ಪ್ರತಿಭಟಿಸಲಾಗುವುದು ಎಂದು ತಿಳಿಸಿದರು.
ಕೈಗೆ ಬೇಸತ್ತ ಜನ: ಹಲವು ಪ್ರಕರಣಗಳಲ್ಲಿ ಭಾಗಿಯಾದ ಡಿ.ಕೆ. ಶಿವಕುಮಾರ್ ಮತ್ತು ರೋಷನ್ ಬೇಗ್ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡಿರುವುದರಿಂದ ಜನ ಬೇಸತ್ತಿದ್ದಾರೆ. ಕಾಂಗ್ರೆಸ್  ನ ದ್ವಿಮುಖ ನೀತಿ ಮತ್ತು ವಂಚನೆಯಿಂದ ರಾಜ್ಯದ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಬೇಸತ್ತು, ಪರ್ಯಾಯ ಮಾರ್ಗವಾಗಿ ಬಹುಜನ ಸಮಾಜ ಪಕ್ಷ ಬೆಂಬಲಿಸಲಿದ್ದಾರೆ ಎಂದರು.
ಪಕ್ಷದ ರಾಜ್ಯ ಸಂಚಾಲಕ ಎನ್.ಮಹೇಶ್ ಮಾತನಾಡಿ, ರಾಜ್ಯದಲ್ಲಿ ಒತ್ತುವರಿಯಾದ ಸರ್ಕಾರಿ ಮತ್ತು ಅರಣ್ಯ ಜಮೀನು ವಶಕ್ಕೆ ಸರ್ಕಾರ ಮುಂದಾಗಬೇಕು. ಈ ಸಂಬಂಧ ಡಾ.ಬಾಲಸುಬ್ರಹ್ಮಣ್ಯಂ ಅವರು ನೀಡಿದ ವರದಿಯನ್ನು ಜಾರಿಗೆ ತರಬೇಕು. ಆದರೆ ಕಂದಾಯ ಸಚಿವ ವಿ.ಶ್ರೀನಿವಾಸಪ್ರಸಾದ್ ಅವರು ಮತ್ತೊಂದು ಸಮಿತಿ ರಚಿಸುವ ಅಗತ್ಯವಿದೆ ಎಂದಿರುವುದು ಸರಿಯಲ್ಲ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement