ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯ

Mainashree
Updated On : 6 Jan 2014, 10:45 am

ಮೈಸೂರು: ಕನ್ನಡಿಗರಿಗೆ ಉದ್ಯೋಗ ಭಾಗ್ಯ ನೀಡುವ ಡಾ.ಸರೋಜಿನಿ ಮಹಿಷಿ ವರದಿಯನ್ನು ಸಂಪೂರ್ಣವಾಗಿ ಜಾರಿಗೆ ತರಬೇಕು ಎಂದು ಮೈಸೂರು ಜಿಲ್ಲಾ ಕನ್ನಡ ಚಳವಳಿಗಾರರ ಸಂಘದ ಅಧ್ಯಕ್ಷ ಬಿ.ಎ. ಶಿವಶಂಕರ್ ಆಗ್ರಹಿಸಿದರು.
ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಡಾ.ಸರೋಜಿನಿ ಮಹಿಷಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ತಯಾರಿಸಿದ ವರದಿಯನ್ನು ಇದುವರೆಗೂ ಜಾರಿಗೆ ತಂದಿಲ್ಲ. ಮಹಿಷಿ ವರದಿ ಸರ್ಕಾರದ ಕೈತಲುಪಿ 28 ವರ್ಷವಾಗಿದೆ. ಆದರೂ ವರದಿಯಲ್ಲಿನ ಅಂಶಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವ ಪ್ರಯತ್ನ ಯಾವುದೇ ಸರ್ಕಾರದಿಂದ ಆಗಿಲ್ಲ ಎಂದು ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ವಿಷಾದಿಸಿದರು.
ಈ ಮಧ್ಯೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ವರದಿಯ ಪರಿಷ್ಕರಣೆ ಆಗಬೇಕು ಎಂದು ಹೇಳಿರುವುದು ಸರಿಯಲ್ಲ. ಇದರಿಂದ ಮತ್ತೊಂದು ವರ್ಷ ವರದಿ ಅನುಷ್ಠಾನ ಕಾರ್ಯ ಮುಂದೂಡಿದಂತೆ ಆಗುತ್ತದೆ. ಆದ್ದರಿಂದ ಕೂಡಲೆ ರಾಜ್ಯ ಸರ್ಕಾರ ಡಾ.ಸರೋಜಿನಿ ಮಹಿಷಿ ವರದಿಯನ್ನು ಅನುಷ್ಠಾನಗೊಳಿಸಬೇಕು ಎಂದು ಅವರು ಒತ್ತಾಯಿಸಿದರು. ನಂಜನಗೂಡಿನ ಕೆಲವು ಕಾರ್ಖಾನೆಗಳಲ್ಲಿ ಕನ್ನಡಿಗರಿಗೆ ಸಿಗಬೇಕಾದ ಉದ್ಯೋಗವನ್ನು ಬಾಂಗ್ಲಾದೇಶದ ಅಕ್ರಮ ವಲಸಿಗರಿಗೆ ನೀಡಲಾಗಿದೆ. ಇದು ಕಾರ್ಮಿಕ ಇಲಾಖೆಯ ಬೇಜವಾಬ್ದಾರಿಗೆ ಹಿಡಿದ ಕನ್ನಡಿಯಾಗಿದೆ. ಆದ್ದರಿಂದ ಈ ಬಗ್ಗೆ ತನಿಖೆ ಆಗಬೇಕು ಎಂದು ತಿಳಿಸಿದರು.
ಜಯಕುಮಾರ್, ಸಂಘಟನಾ ಕಾರ್ಯದರ್ಶಿ ಚಲುವರಾಜು, ಖಜಾಂಚಿ ಬಸವರಾಜು, ಸದಸ್ಯರಾದ ಶ್ರೀಕಂಠ, ವೆಂಕಟೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement