ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಸಿಲ್ಕ್ ಇಂಡಿಯಾ ರೇಷ್ಮೆ ಸೀರೆಗಳ ಪ್ರದರ್ಶನ

Mainashree
Updated On : 6 Jan 2014, 10:38 am

ಮೈಸೂರು: ಹಸ್ತಶಿಲ್ಪ ಸಂಸ್ಥೆಯು ಸಂಕ್ರಾಂತಿ ಹಬ್ಬದ ಅಂಗವಾಗಿ ನಗರದಲ್ಲಿ ಮೂರನೆ ಬಾರಿಗೆ ಸಿಲ್ಕ್ ಇಂಡಿಯಾ- 2014 ಹೆಸರಿನಲ್ಲಿ ಭಾರತದ ಎಲ್ಲಾ ರಾಜ್ಯಗಳ ಪರಿಶುದ್ಧ ರೇಷ್ಮೆ ಸೀರೆಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮಳಿಗೆಯನ್ನು ಜ.8 ರಿಂದ 12 ರವರೆಗೆ ರಿಗಾಲಿಸ್ ಹೊಟೇಲ್‌ನಲ್ಲಿ ಆಯೋಜಿಸಿದೆ.
ಈ ಮೇಳದಲ್ಲಿ ಕಾಶ್ಮೀರದಿಂದ ಕಾಂಚಿಪುರಂವರೆಗಿನ ರೇಷ್ಮೆ ಸೀರೆ ಉತ್ಪಾದಕರು, ರೇಷ್ಮೆ ಸೀರೆ ವಿನ್ಯಾಸಗಾರರು ಮತ್ತು ರೇಷ್ಮೆ ಸಹಕಾರ ಸಂಘಗಳ ಪ್ರತಿನಿಧಿಗಳು ಭಾಗವಹಿಸುವರು. ಜ.8ರ ಸಂಜೆ 4ಕ್ಕೆ ನಗರ ಪೊಲೀಸ್ ಆಯುಕ್ತ ಡಾ.ಎಂ.ಎ. ಸಲೀಂ ಮೇಳ ಉದ್ಘಾಟಿಸುವರು ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಟಿ. ಅಭಿನಂದ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮೇಳದಲ್ಲಿ ಪ್ರಮುಖವಾಗಿ ತಸ್ಸರ್ ರೇಷ್ಮೆ, ಕ್ರೇಪ್ ಮತ್ತು ಜಾರ್ಜೆಟ್ ಸಿಲ್ಕ್ ಸೀರೆಗಳು, ಢಾಕಾ ಸೀರೆಗಳು, ಡಿಸೈನರ್ ಎಂಬ್ರಾಯಿಡರಿ ಸೀರೆ ಮತ್ತು ಡ್ರೆಸ್, ಬಲ್‌ಚೂರಿ ರೇಷ್ಮೆ, ಮಟ್ಕಾ ಸೀರೆಗಳು, ಪ್ರಿಂಟೆಡ್ ಸೀರೆಗಳು, ಪಶ್ಮೀನಾ ಸೀರೆಗಳು, ಡಿಸೈನರ್ ಡ್ರೆಸ್ ಮೆಟಿರಿಯಲ್, ಬಾಗಲ್‌ಪುರ್ ರೇಷ್ಮೆ, ಉಪ್ಪಡಾ ಮತ್ತು ಗೊಡ್ವಾಲ್ ಸೀರೆ, ಮಹೇಶ್ವರಿ ಮತ್ತು ಕೋಟಾ ಸಿಲ್ಕ್, ಟೆಂಪಲ್ ಬಾರ್ಡರ್ ಸೀರೆಗಳು, ಬುಟ್ಟಿ ಸೀರೆ, ಚಂದೇರಿ ಸಿಲ್ಕ್ ದೊರೆಯಲಿದೆ. ಒಟ್ಟು 40 ಮಳಿಗೆ ತೆರೆಯಲಾಗುವುದು ಎಂದು ವಿವರಿಸಿದರು.
ಪ್ರತಿದಿನ ಬೆಳಗ್ಗೆ 10.30 ರಿಂದ ರಾತ್ರಿ 8.30 ರವರೆಗೆ ಎಲ್ಲಾ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟದ ವ್ಯವಸ್ಥೆ ಇದೆ ಎಂದರು. ಸಂಸ್ಥೆಯ ಸಂಯೋಜಕ ಬಿ.ಜೆ. ಶಿವಶಂಕರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement