ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಕಡ್ಡಾಯ ಶಿಕ್ಷಣ ಹಕ್ಕು: ಅರ್ಜಿ ಸಲ್ಲಿಕೆ ಪ್ರಾರಂಭ

Vishwanath S
Updated On : 8 Jan 2014, 12:56 pm

ಮೈಸೂರು: ಜಿಲ್ಲೆಯಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆಯಡಿ ಖಾಸಗಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ 1ನೇ ತರಗತಿಗೆ ಆಯ್ದ 466 ಶಾಲೆಗಳಲ್ಲಿ ಲಭ್ಯವಿರುವ ಶೇ.25 ರಷ್ಟು ಸೀಟುಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆಯಡಿ 3.50 ಲಕ್ಷ ವಾರ್ಷಿಕ ಆದಾಯ ಹೊಂದಿರುವವರು ಮಕ್ಕಳಿಗೆ ಪ್ರವೇಶಾವಕಾಶ ಪಡೆಯಲು ಆಯ್ದ ಶಾಲೆಗಳಲ್ಲಿ ಅಥವಾ ಬಿಇಒ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ಸಲ್ಲಿಸಬಹುದು. ಆಯ್ಕೆ ಮಾಡುವಾಗ ಆದಾಯ 1 ಲಕ್ಷಕ್ಕಿಂತ ಕಡಿಮೆ ಇರುವ ಪೋಷಕರ ಮಕ್ಕಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಅಂತಹ ಮಕ್ಕಳ ಸಂಖ್ಯೆ ಹೆಚ್ಚಾಗಿ ಇದ್ದಲ್ಲಿ ಲಾಟರಿ ಮೂಲಕ ಆಯ್ಕೆ ಮಾಡುವಂತೆ ಜಿಪಂ ಸಿಇಒ ಪಿ.ಎ. ಗೋಪಾಲ್ ತಿಳಿಸಿದ್ದಾರೆ.
ಫೆ.8 ರವರೆಗೆ ದಾಖಲಾತಿ ಕೋರಿ ಅರ್ಜಿ ಸಲ್ಲಿಸಬಹುದು. ಬಿಇಒಳು ಅರ್ಜಿಗಳನ್ನು ಪರಿಶೀಲಿಸಿ ಆಯ್ಕೆ ಪಟ್ಟಿಯನ್ನು ಫೆ.17 ರೊಳಗೆ ಸಲ್ಲಿಸಬೇಕು. ಬಿಇಒಗಳು ದಾಖಲೆಗಳನ್ನು ಅನುಮೋದಿಸಿ ಪಟ್ಟಿಯನ್ನು ಸಂಬಂಧಪಟ್ಟ ಶಾಲೆಗಳಿಗೆ ಸಲ್ಲಿಸಲು ಫೆ.28 ಕಡೆಯ ದಿನವಾಗಿರುತ್ತದೆ. ಮಾ.3 ರಿಂದ ದಾಖಲಾತಿ ಶುರುವಾಗಲಿದೆ. ಒಟ್ಟಾರೆ ಜಿಲ್ಲೆಯಲ್ಲಿ ಪೂರ್ವ ಪ್ರಾಥಮಿಕ- 2246 ಹಾಗೂ 1ನೇ ತರಗತಿಗೆ- 3346 ಒಟ್ಟು 5592 ಸೀಟುಗಳು ಲಭ್ಯವಿರುತ್ತದೆ. ಹೆಚ್ಚಿನ ಮಾಹಿತಿಗೆ ಇಲಾಖೆ ವೆಬ್‌ಸೈಟ್ ಢಿಢಿಢಿ.ಝ್ಛ್ಟ್ಟಟಜಜ್ಡ್ಛಡಿಛ್ಝ್ಟಟಿ.್ಞಛ್ಠ.ಟ್ಝ್ಛಿ.್ಝಟಿ ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement