ಲೋಕ ಸಮರಕ್ಕೆ ಸಜ್ಜಾಗೋಣ: ಮಾಜಿ ಸಚಿವ ರಾಮದಾಸ್
ಮೈಸೂರು: ಮುಂಬರುವ ಲೋಕಸಭಾ ಚುನಾವಣೆ ಎದುರಿಸಲು ಸನ್ನದ್ಧರಾಗೋಣ ಎಂದು ಮಾಜಿ ಸಚಿವ ಎಸ್.ಎ. ರಾಮದಾಸ್ ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.
ಕೃಷ್ಣರಾಜ ಕ್ಷೇತ್ರ ಬಿಜೆಪಿ ಘಟಕವು ಕೃಷ್ಣಮೂರ್ತಿಪುರಂನ ರಾಮಮಂದಿರದಲ್ಲಿ ಭಾನುವಾರ ಏರ್ಪಡಿಸಿದ್ದ ಬೂತ್ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಮಾಜಿ ಸಿಎಂ ಯಡಿಯೂರಪ್ಪ ಪಕ್ಷಕ್ಕೆ ಮರಳಿರುವುದು ಮತ್ತಷ್ಟು ಶಕ್ತಿ ಬಂದಿದೆ. ಮುಂಬರುವ ಲೋಕಸಭಾ ಚುನಾವಣೆ ಎದುರಿಸಲು ನಾವೆಲ್ಲರೂ ಒಟ್ಟಾಗಿ ಶ್ರಮಿಸಬೇಕು ಎಂದರು.
ಜ.16ರಿಂದ 30ರ ತನಕ ನಡೆಯುವ ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ ಹೊಸದಾಗಿ ಹೆಸರು ಸೇರ್ಪಡೆ ಹಾಗೂ ಬಿಟ್ಟು ಹೋಗಿರುವ ಹೆಸರು ಸೇರ್ಪಡೆಗೊಳಿಸಲು ಗಮನ ಹರಿಸಬೇಕು. ಆನ್ಲೈನ್ ಸೌಲಭ್ಯ ಇರುವವರು ್ಛಜ್ಟ್ಞಛ್ಠಟಿಛಡಿಛ್ಞಛ.್ಞಛ್ಠ.ಟ್ಝ್ಛಿ.್ಝಟಿ ಇಲ್ಲಿ ಮತದಾರರ ಪಟ್ಟಿಯನ್ನು ವೀಕ್ಷಿಸಬಹುದು ಹಾಗೂ ಅರ್ಜಿ ಭರ್ತಿ ಮಾಡಿ ಸಲ್ಲಿಸಬಹುದು ಎಂಬುದರ ಜಾಗೃತಿ ಮೂಡಿಸಬೇಕು ಎಂದರು. ಮೈಸೂರು ಸಂಘಟನಾ ಉಸ್ತುವಾರಿ ರೀನಾ ಪ್ರಕಾಶ್, ವಿಧಾನಪರಿಷತ್ ಸದಸ್ಯರಾದ ಸಿದ್ದರಾಜು, ಗೋ. ಮಧುಸೂದನ್ ನಗರಾಧ್ಯಕ್ಷ ಇ. ಮಾರುತಿ ರಾವ್ ಪವಾರ್ ಮಾತನಾಡಿದರು. ವಿಧಾನಪರಿಷತ್ ಮಾಜಿ ಸದಸ್ಯ ತೋಂಟದಾರ್ಯ, ನಗರ ಪಾಲಿಕೆ ಸದಸ್ಯರಾದ ಬಿ.ವಿ. ಮಂಜುನಾಥ್, ಶಿವಕುಮಾರ್, ಮ.ವಿ. ರಾಮಪ್ರಸಾದ್, ಜಗದೀಶ್, ಮಲ್ಲಪ್ಪಗೌಡ ಇದ್ದರು.