ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಈ ಬಾರಿಯೂ ವಿಶ್ವನಾಥ್ ಅಭ್ಯರ್ಥಿ: ಧರ್ಮಸೇನ

Vishwanath S
Updated On : 10 Jan 2014, 12:54 pm

ಕೆ.ಆರ್. ನಗರ: ಮೈಸೂರು- ಕೊಡಗು ಕ್ಷೇತ್ರದಿಂದ ಮುಂಬರುವ ಲೋಕಸಭಾ ಚುನಾವಣೆಗೆ ಸಂಸದ ಎಚ್. ವಿಶ್ವನಾಥ್ ಅವರೆ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದು, ಈಗಾಗಲೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಅವರನ್ನೇ ಶಿಫಾರಸು ಮಾಡಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಆರ್. ಧರ್ಮಸೇನ ಹೇಳಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷಕ್ಕಾಗಿ ತ್ಯಾಗ ಮಾಡುವ ನಾಯಕರಲ್ಲಿ ಎಚ್.ವಿಶ್ವನಾಥ್ ಮೊದಲಿಗರಾಗಿದ್ದು, ಅವರು ಸ್ಪರ್ಧಿಸದೆ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಪತ್ನಿ ಪ್ರಮೋದಾದೇವಿ ಒಡೆಯರ್ ಅವರಿಗೆ ಅವಕಾಶ ಕಲ್ಪಿಸುವುದು ಸಂಸದರ ನಿರ್ಧಾರಕ್ಕೆ ಸೇರಿದ್ದು ಎಂದು ತಿಳಿಸಿದರು. ಈ ಹಿಂದೆ ಕೆ.ಆರ್. ನಗರ ವಿಧಾನಸಭಾ ಚುನಾವಣೆಯಲ್ಲಿಯೂ ತಾವು ಸ್ಪರ್ಧಿಸದೆ ದೊಡ್ಡಸ್ವಾಮೇಗೌಡರಿಗೆ ಅವಕಾಶ ಕಲ್ಪಿಸಿಕೊಟ್ಟಿದರು. ಆದ್ದರಿಂದ ಪಕ್ಷ ಅವರನ್ನೇ ಅಭ್ಯರ್ಥಿಯನ್ನಾಗಿ ಮಾಡಲಿದೆ. ಪಕ್ಷದ ಹಿತದೃಷ್ಟಿಯಿಂದ ಅವರು ಯಾವುದೆ ನಿರ್ಧಾರ ಕೈಗೊಂಡರೂ ಅದಕ್ಕೆ ನಮ್ಮೆಲ್ಲರ ಬೆಂಬಲವಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಿಜೆಪಿಗೆ ವಾಪಸ್ ಆಗಿರುವುದರಿಂದ ಕಾಂಗ್ರೆಸ್‌ಗೆ ಯಾವುದೇ ನಷ್ಟವಿಲ್ಲ. ಬದಲಾಗಿ ಬಿಜೆಪಿಗೆ ತೊಂದರೆಯಾಗಲಿದೆ. ಕಳೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕೆಜೆಪಿ-ಬಿಜೆಪಿ- ಜೆಡಿಎಸ್ ಒಂದಾದರೂ ಯಾವುದೇ ಗೆಲುವು ಸಾಧಿಸಲಾಗಲಿಲ್ಲ ಎಂದು ಹೇಳಿದರು.
ತಾ. ಕಾಂಗ್ರೆಸ್ ಮುಖಂಡ ದೊಡ್ಡಸ್ವಾಮೇಗೌಡ, ರಾಂಪುರ ಕಾಳೇಗೌಡ, ಬ್ಲಾಕ್ ಅಧ್ಯಕ್ಷ ಬಿ.ಎಲ್. ರಾಜಶೇಖರ್, ಪ್ರಧಾನ ಕಾರ್ಯದರ್ಶಿ ರಾಜಶೇಖರ್, ಜಿಲ್ಲಾ ಮಾಧ್ಯಮ ಪ್ರಮುಖ ಮಹದೇವ ಗಾಣಿಗ, ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆ ಮಾಜಿ ನಿರ್ದೇಶಕ ಕಾಳಯ್ಯ, ಸ್ವಾಮಿ, ಚಿಕ್ಕಕೊಪ್ಪಲು ಗಿರೀಶ್ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement