ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಎಸ್‌ಪಿಐ ಜಿಲ್ಲಾ ಸಮ್ಮೇಳನ

Vishwanath S
Updated On : 10 Jan 2014, 12:55 pm

ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ವತಿಯಿಂದ 10ನೇ ಮೈಸೂರು ಜಿಲ್ಲಾ ಸಮ್ಮೇಳನವನ್ನು ಜ.11 ಮತ್ತು 12 ರಂದು ಜೆಎಲ್‌ಬಿ ರಸ್ತೆ ರೋಟರಿ ಭವನದಲ್ಲಿ ಏರ್ಪಡಿಸಿದೆ. 11 ರಂದು ಬೆಳಗ್ಗೆ 10.30ಕ್ಕೆ ಜನಪದ ವಿದ್ವಾಂಸ ಪ್ರೊ.ಕಾಳೇಗೌಡ ನಾಗವಾರ ಸಮ್ಮೇಳನ ಉದ್ಘಾಟಿಸುವರು. ಸಿದ್ಧತಾ ಸಮಿತಿ ಅಧ್ಯಕ್ಷ ಬಾದಲ್ ನಂಜುಂಡಸ್ವಾಮಿ, ಎಸ್‌ಪಿಐ ರಾಜ್ಯ ಕಾರ್ಯದರ್ಶಿ ಹುಳ್ಳಿ ಉಮೇಶ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಜಿಲ್ಲಾಧ್ಯಕ್ಷ ಎಲ್. ಜಗದೀಶ್ ಸೂರ್ಯ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ಕಾರ್ಯದರ್ಶಿ ಮಹೇಶ್‌ಕುಮಾರ್ ತಿಳಿಸಿದ್ದಾರೆ.
ಅಪರಿಚಿತ ವ್ಯಕ್ತಿ ಸಾವು
ಕೆ.ಆರ್. ಆಸ್ಪತ್ರೆ ಆವರಣದಲ್ಲಿ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿದ್ದ 50 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಬುಧವಾರ ಮೃತಪಟ್ಟಿದ್ದಾರೆ. ಚಹರೆ- 5.4 ಅಡಿ ಎತ್ತರ, ಗೋದಿ ಮೈಬಣ್ಣ, ಕೋಲು ಮುಖ, ಸಣಕಲು ದೇಹ, ಎಡ ಎದೆಯ ಹತ್ತಿರ ಕಪ್ಪು ಕಾರೆ ಹರಳಿದೆ. ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದಾರೆ. ಮೃತರ ವಾರಸುದಾರರು ಇದ್ದಲ್ಲಿ ದೂ.0821- 2418306 ಸಂಪರ್ಕಿಸಲು ದೇವರಾಜ ಠಾಣೆ ಪೊಲೀಸರು ಕೋರಿದ್ದಾರೆ.
ಸಿಎಆರ್ ಪೇದೆ ಆತ್ಮಹತ್ಯೆಗೆ ಯತ್ನ
ನಗರ ಸಶಸ್ತ್ರ ಮೀಸಲು ಪಡೆಯ (ಸಿಎಆರ್) ಪೇದೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಮಂಡ್ಯ ಮೂಲದ ಜನಾರ್ಧನ್ (22) ಎಂಬವರೆ ಆತ್ಮಹತ್ಯೆಗೆ ಯತ್ನಿಸಿದ ಪೇದೆ. ಇವರು ಮೈಸೂರು ರೇಸ್ ಕೋರ್ಸ್ ಹಿಂಭಾಗದಲ್ಲಿರುವ ಸಿಎಆರ್ ಮೈದಾನದಲ್ಲಿ ಮಧ್ಯಾಹ್ನ 3 ರಷ್ಟರಲ್ಲಿ ವಿಷ ಸೇವಿಸಿದ್ದಾರೆ. ಅಸ್ವಸ್ಥಗೊಂಡಿದ್ದ ಇವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತ್ಮಹತ್ಯೆಗೆ ಯತ್ನಿಸಲು ಕಾರಣ ತಿಳಿದು ಬಂದಿಲ್ಲ. ಜನಾರ್ಧನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ನಜರ್‌ಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೂಜಾಟ: 7 ಮಂದಿ ಬಂಧನ
ಹುಣಸೂರು ರಸ್ತೆಯಲ್ಲಿರುವ ಜಲದರ್ಶಿನಿ ಅತಿಥಿಗೃಹ ಆವರಣದ ಕೊಠಡಿಯೊಂದರಲ್ಲಿ ಜೂಜಾಡುತ್ತಿದ್ದ 7 ಮಂದಿಯನ್ನು ದೇವರಾಜ ಠಾಣೆ ಪೊಲೀಸರು ಬುಧವಾರ ರಾತ್ರಿ ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು 7 ಮಂದಿಯನ್ನು ಬಂಧಿಸಿ, ಪಣಕ್ಕಿರಿಸಿದ್ದ 18,700 ವಶಪಡಿಸಿಕೊಂಡಿದ್ದಾರೆ. ದೇವರಾಜ ಠಾಣೆ ಇನ್ಸ್‌ಪೆಕ್ಟರ್ ಎಚ್.ಎಂ. ಕಾಂತರಾಜು ಮತ್ತು ಸಿಬ್ಬಂದಿ ಈ ದಾಳಿ ನಡೆಸಿದ್ದಾರೆ.
ಕಾಲೇಜು ವಿದ್ಯಾರ್ಥಿ ನಾಪತ್ತೆ
ನಗರದ ಯಾದವಗಿರಿ ಆಕಾಶವಾಣಿ ವಸತಿಗೃಹ ನಿವಾಸಿ ದೇವೇಂದ್ರಯ್ಯ ಎಂಬವರ ಪುತ್ರ ಡಿ. ಪ್ರಜ್ವಲ್ (19) ನಾಪತ್ತೆಯಾಗಿದ್ದಾರೆ. ಪ್ರಜ್ವಲ್ ವಿದ್ಯಾವರ್ಧಕ ಕಾಲೇಜಿನಲ್ಲಿ ಮೊದಲ ವರ್ಷ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ಜ.3ರ ಸಂಜೆ ಮನೆಯಿಂದ ಹೊರ ಹೋದವನು ನಾಪತ್ತೆಯಾಗಿದ್ದಾನೆ. ಆತನನ್ನು ಪತ್ತೆ ಮಾಡಿಕೊಡುವಂತೆ ತಂದೆ ದೇವೇಂದ್ರಯ್ಯ ಪೊಲೀಸರಿಗೆ ದೂರು ನೀಡಿದ್ದಾರೆ. ಚಹರೆ- 5.2 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ಕೋಲು ಮುಖ, ಕನ್ನಡ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ಸಿಕ್ಕಲ್ಲಿ ದೂ.0821- 2418114, 314 ಸಂಪರ್ಕಿಸಲು ವಿವಿ ಪುರಂ ಠಾಣೆ ಪೊಲೀಸರು ಕೋರಿದ್ದಾರೆ.
ನೀಲಕಂಠಸ್ವಾಮಿ ಅಧ್ಯಕ್ಷರಾಗಿ ಆಯ್ಕೆ
ಮೈಸೂರು: ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಕಂದಾಯ ಇಲಾಖಾ ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ. ನೀಲಕಂಠಸ್ವಾಮಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ.
ಮಸಿ ಪ್ರಕರಣ: ನಾಲ್ವರ ಬಂಧನ
ಮೈಸೂರು:ಸಿಎಫ್‌ಟಿಆರ್‌ಐ ನಿರ್ದೇಶಕ ಡಾ.ರಾಮ್ ರಾಜಶೇಖರನ್ ಅವರ ಮೇಲೆ ಮಸಿ ಎರಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಜನರನ್ನು ಜಯಲಕ್ಷ್ಮಿಪುರಂ ಠಾಣೆ ಪೊಲೀಸರು ಗುರುವಾರ ಸಂಜೆ ಬಂಧಿಸಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ನಗರಾಧ್ಯಕ್ಷ ಕಿರಣ್‌ಕುಮಾರ್‌ಗೌಡ, ಮುಖಂಡರಾದ ಆನಂದ್, ನಂದೀಶ್ ಮತ್ತು ಸುನಿಲ್‌ಕುಮಾರ್ ಬಂಧಿತರು. ರಾಣಿ ಬಹದ್ದೂರ್ ಸಭಾಂಗಣದಲ್ಲಿ ನಡೆಯುತ್ತಿದ್ದ ವಿಚಾರ ಸಂಕಿರಣದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲು ಹೋಗಿದ್ದ ಡಾ.ರಾಮ್ ರಾಜಶೇಖರನ್ ಅವರ ಕಾರು ಅಡ್ಡಗಟ್ಟಿದ ಕರವೇ ಕಾರ್ಯಕರ್ತರು, ಅವರತ್ತ ಕಪ್ಪು ಮಸಿ ಎರಚಿ ಘೋಷಣೆ ಕೂಗಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಜಯಲಕ್ಷ್ಮಿಪುರಂ ಠಾಣೆ ಇನ್ಸ್‌ಪೆಕ್ಟರ್ ಆರ್. ಸುಶೀಲ ಮತ್ತು ಸಿಬ್ಬಂದಿ ನಾಲ್ವರು ಆರೋಪಿಗಳನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ ಎಂದು ನಗರ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಎ.ಎನ್. ರಾಜಣ್ಣ ಕನ್ನಡಪ್ರಭ ಕ್ಕೆ ತಿಳಿಸಿದರು.
ಕಾಲೇಜು ವಿದ್ಯಾರ್ಥಿ ನಾಪತ್ತೆ
ಮೈಸೂರು: ನಗರದ ಯಾದವಗಿರಿ ಆಕಾಶವಾಣಿ ವಸತಿಗೃಹ ನಿವಾಸಿ ದೇವೇಂದ್ರಯ್ಯ ಎಂಬವರ ಪುತ್ರ ಡಿ. ಪ್ರಜ್ವಲ್ (19) ನಾಪತ್ತೆಯಾಗಿದ್ದಾರೆ. ಪ್ರಜ್ವಲ್ ವಿದ್ಯಾವರ್ಧಕ ಕಾಲೇಜಿನಲ್ಲಿ ಮೊದಲ ವರ್ಷ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ಜ.3ರ ಸಂಜೆ ಮನೆಯಿಂದ ಹೊರ ಹೋದವನು ನಾಪತ್ತೆಯಾಗಿದ್ದಾನೆ. ಆತನನ್ನು ಪತ್ತೆ ಮಾಡಿಕೊಡುವಂತೆ ತಂದೆ ದೇವೇಂದ್ರಯ್ಯ ಪೊಲೀಸರಿಗೆ ದೂರು ನೀಡಿದ್ದಾರೆ. ಚಹರೆ- 5.2 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ಕೋಲು ಮುಖ, ಕನ್ನಡ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ಸಿಕ್ಕಲ್ಲಿ ದೂ.0821- 2418114, 314 ಸಂಪರ್ಕಿಸಲು ವಿವಿ ಪುರಂ ಠಾಣೆ ಪೊಲೀಸರು ಕೋರಿದ್ದಾರೆ.
ರಸ್ತೆ ದುರಸಿಗೆಕಾವಲುಪಡೆ ಆಗ್ರಹ
ಪಿರಿಯಾಪಟ್ಟಣ: ತಾಲೂಕಿನ ಪಂಚವಳ್ಳಿ ಗ್ರಾಮದ ಮೂಲಕ ಹಾದು ಹೋಗಿರುವ ಗೋಣಿಕೊಪ್ಪ-ಹುಣಸೂರು ರಸ್ತೆ ದುರಸ್ತಿ ಕಾರ್ಯ ಶೀಘ್ರ ಮುಂದುವರಿಯಲು ಸರ್ಕಾರ ಅಗತ್ಯ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಕಾಲವು ಪಡೆಯ ಕಾರ್ಯಕರ್ತರು ಪ್ರತಿಭಟಿಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಕಾವಲುಪಡೆಯ ತಾಲೂಕು ಅಧ್ಯಕ್ಷ ಎಚ್.ಎ. ಸುಬ್ರಮಣಿ ಮಾತನಾಡಿದರು. ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಸೌಮ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಕಾವಲು ಪಡೆಯ ಗೌರವಾಧ್ಯಕ್ಷ ಯೋಗೇಶ್, ಉಪಾಧ್ಯಕ್ಷ ಮೋಹನ್, ಕಾರ್ಯದರ್ಶಿ ಯೋಗೇಶ್, ಸಹಕಾರ್ಯದರ್ಶಿ ಅಬ್ಜಲ್, ನಗರ ಘಟಕದ ಅಧ್ಯಕ್ಷ ಫ್ರಾನ್ಸಿಸ್, ಪದಾಧಿಕಾರಿಗಳಾದ ಶರವಣ, ಶಿವರಾಜ್, ಶಂಕರ್ ಇದ್ದರು.
ಬುಂಡೆಬೆಸ್ತರಿಗೆ ಅನುಕೂಲ: ಶಾಸಕ
ಹುಣಸೂರು: ತಾಲೂಕಿನಲ್ಲಿ ವಾಸವಿರುವ ಬುಂಡೆ ಬೆಸ್ತರನ್ನು ಇತರೆಡೆ ಇರುವ ಶಿಳ್ಳೆ ಕ್ಯಾತ ಜನಾಂಗಕ್ಕೆ ಸೇರಿಸಲು ಶ್ರಮಿಸುವುದಾಗಿ ಶಾಸಕ ಎಚ್.ಪಿ.ಮಂಜುನಾಥ್ ಭರವಸೆ ನೀಡಿದರು. ತಾಲೂಕಿನ ಹನಗೋಡು ಹೋಬಳಿಯ ಉಮ್ಮತ್ತೂರು ಗ್ರಾಪಂ ಕಾಲೋನಿಯಲ್ಲಿ ಮತದಾರರಿಗೆ ಕೃತಜ್ಞತೆ ಹಾಗೂ ಜನತೆಯ ಮನವಿ ಸ್ವೀಕಾರ ಸಮಾರಂಭದಲ್ಲಿ ಅವರು ಮಾತನಾಡಿದರು. ಬೆಸ್ತ ಸಮಾಜದ ಮುಖಂಡರು ಪ.ಪಂಗಡಕ್ಕೆ ಸೇರಿಸಿ ಎಲ್ಲ ಸವಲತ್ತು ನೀಡಲಾಗುತ್ತಿತ್ತು. 20 ವರ್ಷದಿಂದ ಸವಲತ್ತು ಕಡಿತಗೊಂಡು ಅತಂತ್ರರಾಗಿದ್ದೇವೆಂಬ ಮನವಿಗೆ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಮುಖ್ಯಮಂತ್ರಿಯವರೊಂದಿಗೆ ವಿಷಯ ಪ್ರಸ್ತಾಪಿಸಿ ಜನಾಂಗಕ್ಕೆ ಆಗಿರುವ ಅನ್ಯಾಯ ಸರಿಪಡಿಸುವ ಭರವಸೆ ನೀಡಿದರು.
ನೀಲಕಂಠಸ್ವಾಮಿ ಅಧ್ಯಕ್ಷರಾಗಿ ಆಯ್ಕೆ
ಮೈಸೂರು: ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಕಂದಾಯ ಇಲಾಖಾ ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ. ನೀಲಕಂಠಸ್ವಾಮಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement