ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಮಕ್ಕಳ ಆಸಕ್ತಿ ಗಮನಿಸಿ ಪ್ರೋತ್ಸಾಹಿಸಿ: ಸಿ.ಶಿಖಾ

Vishwanath S
Updated On : 11 Jan 2014, 1:46 am

ಕ.ಪ್ರ.ವಾರ್ತೆ , ಮೈಸೂರು , ಜ. 10
ನಗರದ ಚಾಮುಂಡಿವನಂ ದೇವಸ್ಥಾನದ ಆವರಣದಲ್ಲಿರುವ ಗೋವಿಂದರಾಜ ಮೊದಲಿಯಾರ್ ಧನಭಾಗ್ಯಮ್ಮಾಳ್ ಮೆಮೋರಿಯಲ್ ಟ್ರಸ್ಟ್ ಮತ್ತು ಡಿ.ಜಿ. ತಿರುವೆಂಗಡ ಮೊದಲಿಯಾರ್ ವಿದ್ಯಾಸಂಸ್ಥೆಗಾಗಿ ನಿರ್ಮಿಸಲಾಗಿರುವ ಶಾಲಾ ಕಟ್ಟಡವನ್ನು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಶುಕ್ರವಾರ ಬೆಳಗ್ಗೆ ಉದ್ಘಾಟಿಸಿದರು.
ಜಿಲ್ಲಾಧಿಕಾರಿ ಸಿ.ಶಿಖಾ ಮಾತನಾಡಿ, ನಮ್ಮ ದೇಶದ ಭವಿಷ್ಯ ಮಕ್ಕಳ ಕೈಯಲ್ಲಿದೆ. ಪ್ರಸ್ತುತ ಸ್ಪರ್ಧೆ ಹೆಚ್ಚಾಗಿದೆ. ಮಕ್ಕಳ ಆಸಕ್ತಿ ಅರಿತು ಪೋಷಕರು ಪ್ರೋತ್ಸಾಹಿಸಬೇಕು. ಶಾಲೆಗೆ ಜಿಲ್ಲಾಡಳಿತದಿಂದ ಅಗತ್ಯ ನೆರವು ನೀಡುವುದಾಗಿ ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಎಂ.ಕೆ. ಸೋಮಶೇಖರ್ ಮಾತನಾಡಿ, ಮಕ್ಕಳಿಗೆ ವಿದ್ಯಾಭ್ಯಾಸ ಮಾಡಿಸುವುದು ಬಹುಮುಖ್ಯ. ವಿದ್ಯಾವಂತ ಪೋಷಕರು ಮಕ್ಕಳಿಗೆ ಉತ್ತಮ ಮಾರ್ಗದರ್ಶನ ನೀಡುತ್ತಿದ್ದಾರೆ. ಬಡವರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿದ್ದಾರೆ. ಒಟ್ಟಿನಲ್ಲಿ ಶಿಕ್ಷಣದ ಮಹತ್ವವನ್ನು ಪ್ರತಿಯೊಬ್ಬರು ಅರಿತುಕೊಂಡಿದ್ದಾರೆ ಎಂದು ಅವರು ತಿಳಿಸಿದರು.
ಹೊಸ ಕಟ್ಟಡ: ಚಾಮುಂಡಿವನಂ ದೇವಸ್ಥಾನ ಆವರಣದ 1 ಎಕರೆ ಪ್ರದೇಶದಲ್ಲಿ ಸುಸಜ್ಜಿತ ಶಾಲಾ ಕಟ್ಟಡವನ್ನು ನಿರ್ಮಿಸಲಾಗಿದೆ. ಈ ಕಟ್ಟಡದಲ್ಲಿ 11 ತರಗತಿ ಕೊಠಡಿಗಳಿವೆ. ಅಲ್ಲದೆ, ಕಂಪ್ಯೂಟರ್ ಲ್ಯಾಬ್, ಪ್ರಯೋಗಾಲಯ, ಗ್ರಂಥಾಲಯ ಹಾಗೂ ವಿದ್ಯಾರ್ಥಿಗಳ ಇತರೆ ಚಟುವಟಿಕೆಗಾಗಿ ಪ್ರಾಂಗಣ ಸಹ ಇದೆ. ವಂತಿಗೆ ರಹಿತವಾಗಿ ಉತ್ತಮ ಶಿಕ್ಷಣ ನೀಡುತ್ತಿರುವ ಈ ವಿದ್ಯಾಸಂಸ್ಥೆಯಲ್ಲಿ ಪ್ರಸ್ತುತ 150 ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ.
ನಗರಪಾಲಿಕೆ ಸದಸ್ಯ ಎಂ. ಸುನಿಲ್, ಟ್ರಸ್ಟ್‌ನ ಉಪಾಧ್ಯಕ್ಷ ಡಿ.ಟಿ. ಸುಬ್ರಹ್ಮಣ್ಯ, ಕಾರ್ಯದರ್ಶಿ ಎನ್. ನರೇಂದ್ರಬಾಬು, ಶಾಲೆಯ ಕಾರ್ಯದರ್ಶಿ ತ್ಯಾಗರಾಜ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement