ಅದ್ಧೂರಿ ಗಣರಾಜ್ಯೋತ್ಸವ ಆಚರಣೆಗೆ ನಿರ್ಧಾರ
ಹುಣಸೂರು: ಈ ಬಾರಿಯ ಗಣರಾಜ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಯಿತು.
ತಹಸೀಲ್ದಾರ್ ವೆಂಕಟಾಚಲಪ್ಪ ನೇತೃತ್ವದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ವಿವಿಧ ಸಾಂಟಜ್ಞತಿಕ ಹಾಗೂ ಕ್ರೀಡಾ ಕಾರ್ಯಕ್ರಮಗಳನ್ನು ನಡೆಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ತಾ. ದೈಹಿಕ ಶಿಕ್ಷಕ ಶಿಕ್ಷಣಾಧಿಕಾರಿಗಳ ನೇತೃತ್ವದಲ್ಲಿ ಸಾಂಸ್ಕೃತಿಕ ಹಾಗೂ ಕ್ರೀಡಾ ಸಮಿತಿಗಳನ್ನು ರಚಿಸಿ ಕಾರ್ಯಕ್ರಮಗಳನ್ನು ನಡೆಸಲು ತೀರ್ಮಾನಿಸಲಾಯಿತು.
ಅಧಿಕಾರಿಗಳು ಬರದ ಕಾರಣ ಇಂದಿನ ಸಭೆಯನ್ನು ಮುಂದೂಡುವಂತೆ ದಲಿತ ಮುಖಂಡರು ಸಭೆಯಲ್ಲಿ ಪಟ್ಟು ಹಿಡಿದರು. 39 ಇಲಾಖೆಗಳ ಪೈಕಿ ಕೇವಲ 20 ಅಧಿಕಾರಿಗಳು ಮಾತ್ರ ಬಂದಿದ್ದಾರೆ. ಇಲಾಖಾ ಮುಖ್ಯಸ್ಥರು ಬಂದಿಲ್ಲ. ಪದೇ ಪದೇ ಇದು ಜರುಗುತ್ತಿದೆ. ಎಲ್ಲಾ ಅಧಿಕಾರಿಗಳು ಬಂದ ನಂತರ ಸಭೆ ನಡೆಸುವಂತೆ ಮುಖಂಡರು ಪಟ್ಟು ಹಿಡಿದಾಗ, ಗೈರುಹಾಜರಾದ ಎಲ್ಲ ಅಧಿಕಾರಿಗಳಿಗೂ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿ, ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಲಾಗುವುದೆಂದು ತಹಸೀಲ್ದಾರ್ ಹಾಗೂ ಇಒ ನೀಡಿದ ಭರವಸೆ ಮೇರೆಗೆ ಸಭೆ ಮುಂದುವಞಜಿಸಲಾಯಿತು.
ಸಭೆಯಲ್ಲಿ ಇಒ ಡಾ. ಪ್ರೇಮ್ಕುಮಾರ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸದಸ್ಯರಾದ ನಾರಾಯಣ ರೈ, ಜಯರಾಂ, ಪಿ.ಆರ್. ರಾಚಪ್ಪ, ಭಾಸ್ಕರ್, ದಲಿತ ಮುಖಂಡರಾದ ರತ್ನಪುರಿ ಪುಟ್ಟಸ್ವಾಮಿ, ಡಿ. ಕುಮಾರ್ ಹಾಗೂ ವಿವಿಧ ಇಲಾಖಾಧಿಕಾರಿಗಳು ಭಾಗವಹಿಸಿದ್ದರು.