ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಮೇಲು, ಕೀಳು ತೊಲಗಿಸಿದ ಸಿದ್ಧರಾಮೇಶ್ವರರು

Vishwanath S
Updated On : 14 Jan 2014, 1:09 am

ಪಿರಿಯಾಪಟ್ಟಣ: ಬಸವಣ್ಣನವರ ಸಮಕಾಲೀನರಾದ ಶ್ರೀ ಶಿವಯೋಗಿ ಸಿದ್ದರಾಮೇಶ್ವರರು ಸಮಾಜದಲ್ಲಿ ಮೇಲು-ಕೀಳೆಂಬುದನ್ನು ತೊಡೆದು ಹಾಕುವಲ್ಲಿ ಮಹತ್ತರ ಪಾತ್ರ ವಹಿಸಿದ್ದರು ಎಂದು ತಹಸೀಲ್ದಾರ್ ಎಂ.ಕೆ. ಸವಿತಾ ಹೇಳಿದರು.
ತಾಲೂಕು ಆಡಳಿತ ಭವನದ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಏರ್ಪಡಿಸಿದ್ದ ಶ್ರೀ ಶಿವಯೋಗಿ ಸಿದ್ದರಾಮೇಶ್ವರರ ಜಯಂತಿ ಕಾರ್ಯಕ್ರಮವನ್ನು ಸಿದ್ದರಾಮೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಬಸವಣ್ಣನವರ ಕಾಲದಲ್ಲಿ ಸಿದ್ದರಾಮೇಶ್ವರರು ಸೇರಿದಂತೆ ಅನೇಕ ದಾರ್ಶನಿಕರು ಹಾಗೂ ವಚನಕಾರರು ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸುವುದರೊಂದಿಗೆ ಜಾತಿ ವ್ಯವಸ್ಥೆ, ಮೂಢನಂಬಿಕೆ, ಕಂದಾಚಾರಗಳನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಹೇಳಿದರು.
ಶಿಕ್ಷಣ ಸಂಯೋಜಕ ಶಿವರಾಮೇಗೌಡ ಮಾತನಾಡಿದರು. ತಾಪಂ ಉಪಾಧ್ಯಕ್ಷ ಎಚ್.ಎಸ್. ಪ್ರಕಾಶ್, ಟಿಎಪಿಸಿಎಂಎಸ್ ಅಧ್ಯಕ್ಷ ಜೆ. ಪುಟ್ಟರಾಜು, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎಸ್.ಕೆ. ಲಕ್ಷ್ಮೇಗೌಡ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಂ.ಕೆ. ಪ್ರಕಾಶ್, ಸಮುದಾಯದ ಮುಖಂಡರಾದ ದಾಸಪ್ಪ, ವೇಣುಗೋಪಾಲ್, ರಾಮು, ನಾಗರಾಜ್, ಮಲ್ಲಯ್ಯ, ಚಿನ್ನಸ್ವಾಮಿ, ಶಂಕರ್, ರಮೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement