ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ವಚನಕಾರರ ಚಿಂತನೆಗಳು ವಿಶ್ವಕ್ಕೆ ಮಾದರಿ: ಸಾ.ರಾ. ಮಹೇಶ್

Vishwanath S
Updated On : 14 Jan 2014, 1:09 am

ಕೆ.ಆರ್. ನಗರ: ಸಮಾಜದಲ್ಲಿ ಸಾಮಾಜಿಕ ಕ್ರಾಂತಿ ಉಂಟು ಮಾಡಿದ 12ನೇ ಶತಮಾನ ಜಗತ್ತಿಗೆ ಬೆಳಕು ನೀಡಿದ ಕಾಲ. ಅಂದಿನ ಕಾಲದ ವಚನಕಾರರ ಸಾಧನೆ ಮತ್ತು ಸಮಾಜಮುಖಿ ಚಿಂತನೆಗಳು ವಿಶ್ವಕ್ಕೆ ಮಾದರಿ ಎಂದು ಶಾಸಕ ಸಾ.ರಾ. ಮಹೇಶ್ ಹೇಳಿದರು.
ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಸೋಮವಾರ ನಡೆದ ಶಿವಯೋಗಿ ಸಿದ್ದರಾಮೇಶ್ವರರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮನುಕುಲದ ಉದ್ಧಾರಕ್ಕೆ ದುಡಿದ ಮಹನೀಯರು ಯಾವುದೇ ಒಂದು ಜಾತಿಗೆ ಸೀಮಿತರಾದವರಲ್ಲ. ಅಂತಹ ಮಹಾನುಭಾವರ ಆದರ್ಶ ತತ್ವಗಳನ್ನು ಎಲ್ಲರೂ ಪಾಲಿಸಬೇಕು ಎಂದರು.
ಶಿವಯೋಗಿ ಸಿದ್ಧರಾಮೇಶ್ವರರ ಸವಿನೆನಪಿಗಾಗಿ ಪಟ್ಟಣದಲ್ಲಿ ಸಮುದಾಯ ಭವನ ನಿರ್ಮಿಸಲು ಬೋವಿ ಸಮಾಜದ ಮುಖಂಡರು ಸ್ಥಳ ಗುರುತಿಸಿದರೆ, ಸರ್ಕಾರದಿಂದ ಹಣ ಕೊಡಿಸುವುದರ ಜತೆಗೆ ಶಾಸಕರ ಅನುದಾನ ಮತ್ತು ವೈಯಕ್ತಿಕವಾಗಿ ಸಹಾಯ ಮಾಡುತ್ತೇನೆ ಎಂದರು.
ಶಿಕ್ಷಕ ರಾಜಶೇಖರ್ ಸಿದ್ದರಾಮೇಶ್ವರರ ಜೀವನ ಮತ್ತು ಸಾಧನೆಗಳ ಬಗ್ಗೆ ಉಪನ್ಯಾಸ ನೀಡಿದರು. ಅಲಂಕೃತ ಸಿದ್ದರಾಮೇಶ್ವರರ ಭಾವಚಿತ್ರಕ್ಕೆ ತಾಲೂಕು ಆಡಳಿತದ ವತಿಯಿಂದ ಪುಷ್ಪನಮನ ಸಲ್ಲಿಸಲಾಯಿತು. ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಜೆ. ದ್ವಾರಕೀಶ್, ತಾಪಂ ಅಧ್ಯಕ್ಷೆ ಶಶಿಕಲಾ ರಮೇಶ್, ಮಾಜಿ ಅಧ್ಯಕ್ಷೆ ಭಾಗ್ಯಶಂಕರ್, ಪುರಸಭಾ ಸದಸ್ಯ ಎನ್.ಶಿವಕುಮಾರ್, ಸುಬ್ರಹ್ಮಣ್ಯ, ಎಚ್.ಸಿ. ರಾಜು, ತಹಸೀಲ್ದಾರ್ ಬಿ.ಎನ್. ವೀಣಾಕುಮಾರ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸಿದ್ದಲಿಂಗಮೂರ್ತಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರವಿ, ಕೆ.ಬಿ. ಪ್ರಕಾಶ್, ಕೆ.ಸಿ. ಸತೀಶ್, ಸದಾಶಿವಪ್ಪ, ಸಿದ್ದಯ್ಯ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement