ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಅಡುಗೆ ಅನಿಲ ದರ ಏರಿಕೆ ಖಂಡಿಸಿ ಪ್ರತಿಭಟನೆ

Vishwanath S
Updated On : 15 Jan 2014, 1:11 am

ಹುಣಸೂರು: ಕೇಂದ್ರ ಸರ್ಕಾರ ಅನಿಲ ಸಿಲಿಂಡರ್ ಬೆಲೆ ಏರಿಸಿ ಬಡವರ ಹೊಟ್ಟೆ ಮೇಲೆ ಬರೆ ಎಳೆದಿದೆ. ಸರ್ಕಾರ ಕೂಡಲೆ ಬೆಲೆ ಏರಿಕೆ ಹಿಂಪಡೆಯಬೇಕೆಂದು ಸತ್ಯ ಫೌಂಡೇಶನ್ ಅಧ್ಯಕ್ಷ ಸತ್ಯಪ್ಪ ಆಗ್ರಹಿಸಿದರು.
ಪಟ್ಟಣದ ಸತ್ಯ ಫೌಂಡೇಶನ್ ಆಶ್ರಯದಲ್ಲಿ ಆಟೋ ಚಾಲಕರು ಮಾಲೀಕರ ಸಂಘ, ರೈತ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳು ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಿರುವುದನ್ನು ವಿರೋಧಿಸಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನಡೆದ ಮೆರವಣಿಗೆಯಲ್ಲಿ ಅವರು ಮಾತನಾಡಿದರು.
ಪಟ್ಟಣದಲ್ಲಿ ಆಟೋಗಳ ಅನುಕೂಲಕ್ಕಾಗಿ ಗ್ಯಾಸ್ ಬಂಕ್ ಸ್ಥಾಪಿಸಬೇಕು. ಅನಿಲ ಸಿಲಿಂಡರ್‌ನ ಸಬ್ಸಿಡಿ ಬ್ಯಾಂಕಿಗೆ ಜಮಾವಣೆಯಲ್ಲಿ ಆಗುತ್ತಿರುವ ವಿಳಂಬ ತಪ್ಪಿಸಬೇಕು, ಆಟೋ ಚಾಲಕರಿಗಾಗಿ ಪಟ್ಟಣದಲ್ಲಿ ಆಟೋ ಭವನ ನಿರ್ಮಿಸಬೇಕು, ಎಲ್ಲಾ ತಂಬಾಕು ಬೆಳೆಗಾರರಿಗೆ ಮಾರಾಟ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿ ಉಪ ವಿಭಾಗಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ದಸಂಸ ಜಿಲ್ಲಾ ಸಂಚಾಲಕ ನಿಂಗರಾಜ ಮಲ್ಲಾಡಿ, ಆಟೋ ಚಾಲಕರ ಸಂಘದ ಅಧ್ಯಕ್ಷ ನಾಗರಾಜ, ಆದಿಜಾಂಬವ ಸಂಘದ ಅಧ್ಯಕ್ಷ ಬೆಳಾತ್ತೂರು ಮಹದೇವ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement