ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಕಬ್ಬು ದರ ನಿಗದಿ; ಅನ್ಯಾಯ ಸರಿಪಡಿಸುತ್ತೇವೆ

Vishwanath S
Updated On : 15 Jan 2014, 1:11 am

ಮೈಸೂರು: ಕಬ್ಬು ದರ ನಿಗದಿಯಲ್ಲಿ ಆಗಿರುವ ಅನ್ಯಾಯ ಸರಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಕಬ್ಬು ಬೆಳೆಗಾರರಿಗೆ ಭರವಸೆ ನೀಡಿದ್ದಾರೆ. ಮಂಗಳವಾರ ಮೈಸೂರಿನಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಮನವಿ ಸ್ವೀಕರಿಸಿ ಮಾತನಾಡಿದ ಅವರು, ಕಬ್ಬು ದರ ನಿಗದಿಯಲ್ಲಿ ದಕ್ಷಿಣ ಭಾಗದ ಕಾರ್ಖಾನೆಗಳ ವ್ಯಾಪ್ತಿಯ ಬಣ್ಣಾರಿ ಕಾರ್ಖಾನೆ ದರ ನಿಗದಿಯಲ್ಲಿ ಆಗಿರುವ ಅನ್ಯಾಯ ಸರಿಪಡಿಸಲು ಸರ್ಕಾರ ವಿಶೇಷ ಕ್ರಮ ಕೈಗೊಳ್ಳುತ್ತದೆ. ಸರ್ಕಾರ ನಿಗದಿ ಮಾಡಿರುವ ಟನ್ನಿಗೆ 2,650 ಬಾಬ್ತು ಬಾಕಿ, 250 ಅನ್ನು ಶೀಘ್ರವೇ ಕೊಡಿಸಲು ಬದ್ಧವಿರುವುದಾಗಿ ಅವರು ತಿಳಿಸಿದ್ದಾರೆ. ಇದೇ ವೇಳೆ ಹಾಜರಿದ್ದ ಕಂದಾಯ ಸಚಿವ ವಿ.ಶ್ರೀನಿವಾಸಪ್ರಸಾದ್, ಸಹಕಾರ ಸಚಿವ ಎಚ್.ಎಸ್. ಮಹದೇವಪ್ರಸಾದ್, ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ಮುಖ್ಯಮಂತ್ರಿಗಳು ತಮ್ಮ ಬೇಡಿಕೆಗಳನ್ನು ಈಡೇರಿಸುವರು. ಅವರ ಭರವಸೆ ನಂಬಿ ತಕ್ಷಣ ಚಳವಳಿಯನ್ನು ಕೈಬಿಡುವಂತೆ ರೈತ ಮುಖಂಡರಲ್ಲಿ ಮನವಿ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement