ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಉತ್ತಮ ಆಡಳಿತ ನೀಡುವಲ್ಲಿ ಸಿಎಂ ವಿಫಲ

Vishwanath S
Updated On : 17 Jan 2014, 12:53 pm

ಕೆ.ಆರ್. ನಗರ: ರಾಜ್ಯದ ಇತಿಹಾಸದಲ್ಲಿಯೇ ಸಿದ್ದರಾಮಯ್ಯ ಅತ್ಯಂತ ದುರ್ಬಲ ಹಾಗೂ ಅಸಮರ್ಥ ಮುಖ್ಯಮಂತ್ರಿ ಎಂದು ಕಾಂಗ್ರೆಸ್ ಪಕ್ಷದವರೇ ಹೇಳುತ್ತಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಹೇಮಂತ್‌ಕುಮಾರ್ ಟೀಕಿಸಿದರು.
ಪಟ್ಟಣದ ಅಕ್ಷತ ಹಾಲ್‌ನಲ್ಲಿ ತಾಲೂಕು ಬಿಜೆಪಿ ವತಿಯಿಂದ ನಡೆದ ಬೂತ್‌ಮಟ್ಟದ ಅಧಿಕೃತ ಪ್ರತಿನಿಧಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಹಿಂದುಳಿದ ವರ್ಗದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುತ್ತಾರೆ, ಅವರ ಅಧಿಕಾರಾವಧಿಯಲ್ಲಿ ರಾಜ್ಯಕ್ಕೆ ಉತ್ತಮ ಕೆಲಸಗಳಾಗುತ್ತವೆ ಎಂಬ ರಾಜ್ಯದ ಜನತೆ ನಿರೀಕ್ಷೆ ಹುಸಿಯಾಗಿದೆ. ಅವರ ಸಾಮರ್ಥ್ಯಕ್ಕೆ ತಕ್ಕಂತೆ ಆಡಳಿತ ನಡೆಸುತ್ತಿಲ್ಲ ಎಂದು ದೂರಿದರು.
ಹಾಸನ ಜಿಲ್ಲಾ ಬಿಜೆಪಿ ಮುಖಂಡ ನವಲೇ ಅಣ್ಣಪ್ಪ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ಕಾರ್ಯದರ್ಶಿ ಪ್ರಭಾಕರ್ ಜೈನ್, ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನಪ್ಪ, ಪ್ರಧಾನ ಕಾರ್ಯದರ್ಶಿ ಸಿ.ಕೆ. ಬಾಲಮನೋಹರ, ಶಶಿಧರ್‌ಮೂರ್ತಿ, ಚಂದಗಾಲು ಪ್ರವೀಣ್, ರವಿ, ಮಹಿಳಾ ಮೋರ್ಚಾದ ಅಧ್ಯಕ್ಷ ಶುಭಾ, ಮುರಳಿ, ಹೊಸೂರು ರಾಚಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement