ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ವೀರಭದ್ರೇಶ್ವರ ದೇಗುಲಕ್ಕೆ 10 ಲಕ್ಷ ಬಿಡುಗಡೆ

Vishwanath S
Updated On : 18 Jan 2014, 1:57 am

ಕೆ.ಆರ್. ನಗರ: ಪಟ್ಟಣದ ಮಧುವನಹಳ್ಳಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣ ಮಾಡಲಿರುವ ವೀರಭದ್ರೇಶ್ವರ ದೇವಾಲಯಕ್ಕೆ ಶಾಸಕರ ನಿಧಿಯಿಂದ 10 ಲಕ್ಷಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಶಾಸಕ ಸಾ.ರಾ. ಮಹೇಶ್ ಹೇಳಿದರು.
ದೇವಾಲಯ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು, ದೇವಾಲಯ ಕಟ್ಟುವುದರ ಜತೆಗೆ ಮನಸ್ಸುಗಳನ್ನು ಕಟ್ಟುವ ಕೆಲಸ ಮಾಡಬೇಕು, ಆ ಮೂಲಕ ಸಹ ಬಾಳ್ವೆ ನಡೆಸಿ ಪರಸ್ಪರ ಸಹೋದರತ್ವದಿಂದ ಬದುಕಬೇಕು ಎಂದು ತಿಳಿಸಿದರು.
ಶತಮಾಗಳಷ್ಟು ಹಳೆಯದಾದ ದೇವಾಲಯವನ್ನು ಉತ್ತಮವಾಗಿ ದುರಸ್ತಿಗೊಳಿಸಲು ದೇವಾಲಯದ ವ್ಯಾಪ್ತಿಗೆ ಒಳಪಡುವ 10 ಗ್ರಾಮಗಳ ಸಾರ್ವಜನಿಕರು ಸಹಕಾರ ನೀಡಬೇಕು. ಚುನಾವಣೆ ವೇಳೆ ಮಾತ್ರ ರಾಜಕೀಯ ಮಾಡಬೇಕು ಉಳಿದ ಸಮಯದಲ್ಲಿ ಗ್ರಾಮಗಳ ಅಭಿವೃದ್ಧಿಗೆ ದುಡಿಯಿರಿ ಎಂದು ಅವರು ಕಿವಿಮಾತು ಹೇಳಿದರು.
ಗಾವಡಗೆರೆ ಗುರುಲಿಂಗ ಜಂಗಮ ಮಠದ ನಟರಾಜ ಶ್ರೀಗಳು ಮಾತನಾಡಿ, ಶಾಸಕ ಸಾ.ರಾ. ಮಹೇಶ್ ಉತ್ತಮ ಕೆಲಸ ಮಾಡುತ್ತಿದ್ದು, ಎಲ್ಲರೂ ಅವರ ಸೇವೆಯನ್ನು ಪಡೆದುಕೊಳ್ಳಿ ಎಂದರಲ್ಲದೆ, ಆಧುನಿಕ ಯುಗದಲ್ಲಿ ಮನುಷ್ಯ ಧರ್ಮ ಧಾರ್ಮಿಕತೆಯಿಂದ ದೂರಾಗುತ್ತಿದ್ದು, ದೇವಾಲಯಗಳಿಗೆ ಆಗಾಗ ಭೇಟಿ ನೀಡುತ್ತಿದ್ದರೆ ಮನಸ್ಸಿಗೆ ಶಾಂತಿ ನೆಮ್ಮದಿ ದೊರೆಯುತ್ತದೆ ಎಂದು ತಿಳಿಸಿದರು.
ನಂತರ ಶಾಸಕರು 23ನೇ ವಾರ್ಡ್‌ನಲ್ಲಿ ಸಂಚರಿಸಿ ಸಾರ್ವಜನಿಕ ಸಮಸ್ಯೆ ಆಲಿಸಿ, ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರವಾಗಿ ಆದ್ಯತೆಯ ಮೇಲೆ ಅನುದಾನ ಕೊಡಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು. ಪುರಸಭಾ ಮಾಜಿ ಅಧ್ಯಕ್ಷ ಡಿ.ಕಾಂತರಾಜು, ಸದಸ್ಯರಾದ ಕೆ.ಎಲ್. ಜಗದೀಶ್, ಸರೋಜ ಮಹದೇವ್, ಶಿವಕುಮಾರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement