ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ರಸ್ತೆಬದಿ ವ್ಯಾಪಾರಿಗಳು ಸಂಘಟಿತರಾಗಲು ಕರೆ

Rashmi Kasaragodu
Updated On : 22 Jan 2014, 1:31 am

ಮೈಸೂರು: ರಸ್ತೆಬದಿ ವ್ಯಾಪಾರಿಗಳು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಹಾಗೂ ಮಾಜಿ ಸಂಸದ ಕಾಗಲವಾಡಿ ಎಂ.ಶಿವಣ್ಣ ಕರೆ ನೀಡಿದರು.
ಮೈಸೂರು ಜಿಲ್ಲಾ ರಸ್ತೆಬದಿ ವ್ಯಾಪಾರಿಗಳ ಸಂಘವು ದೇವರಾಜ ಮೊಹಲ್ಲಾದಲ್ಲಿರುವ ಆಲಮ್ಮನ ಛತ್ರದಲ್ಲಿ ಏರ್ಪಡಿಸಿದ್ದ ರಸ್ತೆಬದಿ ವ್ಯಾಪಾರಿಗಳ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಹೇಳಿದಂತೆ ಶಿಕ್ಷಣ, ಸಂಘಟನೆ, ಹೋರಾಟಕ್ಕೆ ಹೆಚ್ಚು ಒತ್ತು ನೀಡಬೇಕು. ಅಸಂಘಟಿತ ಕಾರ್ಮಿಕರ ಮಕ್ಕಳಿಗೆ ವೈದ್ಯಕೀಯ ಶಿಕ್ಷಣ ಲಭಿಸಬೇಕೆಂಬ ಉದ್ದೇಶದಿಂದ ಬೆಂಗಳೂರು ಮತ್ತು ಗುಲ್ಬರ್ಗದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗಿದೆ. ಇದರ ಉಪಯೋಗ ಪಡೆಯಲು ಇಎಸ್ಐ ಪಾವತಿಸುವುದು ಕಡ್ಡಾಯವಾಗಿದ್ದು, ಎಲ್ಲರೂ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ಇದೇ ವೇಳೆ ಸಂಘದ ಪದಾಧಿಕಾರಿಗಳು ಕಾಗಲವಾಡಿ ಎಂ.ಶಿವಣ್ಣ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಸಂಸದ ಎಚ್.ವಿಶ್ವನಾಥ್, ಶಾಸಕ ಎಂ.ಕೆ.ಸೋಮಶೇಖರ್, ಮಾಜಿ ಮೇಯರ್ ಸಂದೇಶ್ ಸ್ವಾಮಿ, ಮಾಜಿ ಉಪ ಮೇಯರ್ ಎಂ.ಜೆ.ರವಿಕುಮಾರ್, ಡಾ.ಎಸ್. ಚಿದಂಬರ್, ಎಚ್.ಜಿ. ಜೋಷಿ ಇತರರು ಇದ್ದರು.  


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement