ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಸಂಭಾಜಿ ಗಡಿಪಾರಿಗೆ ಆಗ್ರಹಿಸಿ ಪ್ರತಿಭಟನೆ

Rashmi Kasaragodu
Updated On : 22 Jan 2014, 1:30 am

ಮೈಸೂರು: ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂದು ಹೇಳಿಕೆ ನೀಡಿರುವ ಬೆಳಗಾವಿಯ ಎಂಇಎಸ್ ಶಾಸಕ ಸಂಭಾಜಿ ಪಾಟೀಲ್ ಅವರ ಗಡಿಪಾರಿಗೆ ಆಗ್ರಹಿಸಿ ಕರ್ನಾಟಕ ಸೇನಾ ಪಡೆಯ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟಿಸಿದರು.
ಕನ್ನಡ ಭಾಷೆ, ನಾಡು- ನುಡಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಸಂಭಾಜಿ ಪಾಟೀಲ್ ಅವರನ್ನು ಕೂಡಲೇ ಗಡಿಪಾರು ಮಾಡಬೇಕು. ಅವರ ಶಾಸಕ ಸ್ಥಾನವನ್ನು ರದ್ದುಪಡಿಸಬೇಕು. ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕು ಎಂದು ಅವರು ಒತ್ತಾಯಿಸಿದರು. ಸೇನಾ ಪಡೆಯ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ಗೌಡ, ಮುಖಂಡರಾದ ಮೋಹನ್, ಪ್ರಭುಶಂಕರ, ಜಯಪ್ರಕಾಶ್ಗೌಡ, ಜಗದೀಶ್, ನಾರಾಯಣಗೌಡ, ಶಾಂತಮೂರ್ತಿ, ಗುರು, ಭರತ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement