ಇಂದು ವಿದ್ಯುತ್ ಪೂರೈಕೆ ವ್ಯತ್ಯಯ
ಮೈಸೂರು: ದಕ್ಷಿಣ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರ ಹೊಮ್ಮುವ 11 ಕೆವಿಎಲ್ಎಫ್-1 ಫೀಡರ್ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.24ರ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ನಿಲುಗಡೆಯಾಗಲಿದೆ ಎಂದು ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ. ವಿಶ್ವೇಶ್ವರನಗರ, ಇಂಡಸ್ಟ್ರೀಯಲ್ ಸಬರ್ಬ್ 2ನೇ ಹಂತ, ಕನಕಗಿರಿ, ಚಾಮುಂಡಿಪುರಂ, ವಿದ್ಯಾರಣ್ಯಪುರಂ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಫೆ. 2 ರಿಂದ ಮುಡುಕುತೊರೆಯಮಲ್ಲಿಕಾರ್ಜುನಸ್ವಾಮಿ ಜಾತ್ರೆ
ಮೈಸೂರು: ಟಿ.ನರಸೀಪುರ ತಾಲೂಕಿನ ಮುಡುಕುತೊರೆಯ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನ ಜಾತ್ರೆಯು ಫೆ.2 ರಿಂದ 18 ರವರೆಗೆ ನಡೆಯಲಿದೆ ಎಂದು ವೈದ್ಯನಾಥೇಶ್ವರ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಾಹಣಾಧಿಕಾರಿ ತಿಳಿಸಿದ್ದಾರೆ.ಫೆ.9 ರಂದು ರಥೋತ್ಸವ, ಫೆ.12 ರಂದು ತೆಪ್ಪೋತ್ಸವ ಹಾಗೂ ಫೆ.17 ರಂದು ಬಸವಮಾಲೆ ನಡೆಯಲಿದ್ದು, ಜಾತ್ರೆ ಸಂಬಂಧಿಸಿದಂತೆ ಲೋಕೋಪಯೋಗಿ ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಸಭೆ ನಡೆಯಿತು. ಸಭೆಯಲ್ಲಿ ಮೈಸೂರು ಉಪವಿಭಾಗಾಧಿಕಾರಿ, ವಿವಿಧ ಇಲಾಖಾ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಭಾಗವಹಿಸಿದ್ದರು. ಜಾತ್ರೆ ಕೈಗೊಳ್ಳಲು ಅಧಿಕಾರಿಗಳು ಮಾಡಿಕೊಳ್ಳಬೇಕಾದ ಪೂರ್ವಸಿದ್ದತೆಗಳ ಬಗ್ಗೆ ಸಚಿವರು ಸಭೆಯಲ್ಲಿ ಚರ್ಚಿಸಿದರು.