ಕ್ಯಾನ್ಸರ್ ಸೆಂಟರ್ ನಿರ್ಮಾಣಕ್ಕೆ ಗುದ್ದಲಿಪೂಜೆ
ಮೈಸೂರು: ನಗರದ ಹೊರವಲಯದ ವರ್ತುಲ ರಸ್ತೆಯಲ್ಲಿರುವ ನಾರಾಯಣ ಹೆಲ್ತ್ ಸಂಸ್ಥೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಸಿಟಿ ಕ್ಲಿನಿಕ್ ಹಾಗೂ ಕ್ಯಾನ್ಸರ್ ಸೆಂಟರ್ ನಿರ್ಮಾಣಕ್ಕೆ ಶನಿವಾರ ಗುದ್ದಲಿಪೂಜೆ ನೆರವೇರಿಸಲಾಯಿತು. ಗುದ್ದಲಿಪೂಜೆ ನೆರವೇರಿಸಿದ ನಾರಾಯಣ ಹೃದಯಾಲಯದ ಅಧ್ಯಕ್ಷ ಡಾ. ದೇವಿಶೆಟ್ಟಿ ಮಾತನಾಡಿ, ಕ್ಯಾನ್ಸರ್ ರೋಗವು ಇಂದು ಭಾರತದಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿರುವ ಬಹುತೇಕ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳು ಕೇವಲ ಬೆಂಗಳೂರಿನಲ್ಲಿ ಮಾತ್ರ ನೆಲೆಸಿವೆ. ಹೀಗಾಗಿ ಮೈಸೂರಿನ ನಾರಾಯಣ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ನಲ್ಲಿ ಕ್ಯಾನ್ಸರ್ ಘಟಕ ತರುವುದರಿಂದ ಈ ಭಾಗದಲ್ಲಿನ ಸುತ್ತಮುತ್ತಲಿನ ಜನತೆಗೆ ಕ್ಯಾನ್ಸರ್ ಸಲುವಾಗಿ ಗುಣಮಟ್ಟದ ಚಿಕಿತ್ಸಾ ಸೌಲಭ್ಯ ಒದಗಿಸಲು ಸಾಧ್ಯವಾಗಿಸಿದೆ ಎಂದರು.