ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಪಾದಚಾರಿಗಳ ಜಾಗೃತಿಗಾಗಿ ವಾಕಥಾನ್

Rashmi Kasaragodu
Updated On : 26 Jan 2014, 2:23 am

ಮೈಸೂರು: ನಗರ ಪೊಲೀಸರು 25ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಪಾದಚಾರಿಗಳ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಲು ಶನಿವಾರ ವಾಕಥಾನ್ ಆಯೋಜಿಸಿದ್ದರು. ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಈ ವಾಕಥಾನ್ಗೆ ಮೈಸೂರು ವಿವಿ ಕುಲಪತಿ ಪ್ರೊ.ಕೆ.ಎಸ್. ರಂಗಪ್ಪ ಅವರು ಚಾಲನೆ ನೀಡಿದರು. ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ಹೊರಟ ಈ ನಡಿಗೆಯು ಕೆ.ಆರ್. ವೃತ್ತ, ಸಯ್ಯಾಜಿರಾವ್ ರಸ್ತೆ, ಆಯುರ್ವೇದ ಕಾಲೇಜು ವೃತ್ತ, ಇರ್ವಿನ್ ರಸ್ತೆ, ನೆಹರು ವೃತ್ತ, ಅಶೋಕ ರಸ್ತೆ, ದೊಡ್ಡಗಡಿಯಾರ, ಚಾಮರಾಜ ವೃತ್ತದ ಮೂಲಕ ಸಾಗಿ ಅರಮನೆ ಆವರಣದಲ್ಲಿ ಅಂತ್ಯಗೊಂಡಿತು. ನಗರದ ವಿವಿಧ ಶಾಲೆಗಳ ನೂರಾರು ವಿದ್ಯಾರ್ಥಿಗಳು ಈ ನಡಿಗೆಯಲ್ಲಿ ಪಾಲ್ಗೊಂಡು, ರಸ್ತೆ ಸುರಕ್ಷತೆ, ಪಾದಚಾರಿಗಳ ಸುರಕ್ಷತೆ ಹಾಗೂ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸಿದರು.


ಹಲ್ಲೆಗೊಳಗಾದ ವೈಭವಿಗೆ ಅಗತ್ಯ ನೆರವು: ಶ್ರೀನಿವಾಸಪ್ರಸಾದ್

ಮೈಸೂರು: ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿ ವೈಭವಿಗೆ ಅಗತ್ಯ ನೆರವು ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸಪ್ರಸಾದ್ ಭರವಸೆ ನೀಡಿದರು. ನಗರದ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿ ವೈಭವಿಯನ್ನು ಶನಿವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ವೈಭವಿಯ ಆರೋಗ್ಯ ಸ್ಥಿತಿಯ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದ ಸಚಿವರು, ಬಾಲಕಿಯು ಪ್ರಾಣಪಾಯದಿಂದ ಪಾರಾಗಿದ್ದಾಳೆಂದು ವೈದ್ಯರು ತಿಳಿಸಿದ್ದಾರೆ. ಬಾಲಕಿಯ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು. ಅಲ್ಲದೆ, ದೊಡ್ಡುಹುಂಡಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿರುವ ವೈಭವಿಯ ಸಹೋದರ ದರ್ಶನ್ನ ಶಿಕ್ಷಣಕ್ಕೂ ತೊಂದರೆಯಾಗದಂತೆ ವ್ಯವಸ್ಥೆ ಮಾಡುವುದಾಗಿಯೂ ಅವರು ಹೇಳಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement