ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ರೈತರಿಗೆ ಸಕಾಲದಲ್ಲಿ ಸಾಲ ಒದಗಿಸಿ: ಹರೀಶ್ಗೌಡ

Rashmi Kasaragodu
Updated On : 26 Jan 2014, 2:24 am

ಹುಣಸೂರು: ಪ್ರತಿಯೊಬ್ಬ ರೈತರಿಗೂ ಸಕಾಲದಲ್ಲಿ ಸಾಲ ಸೌಲಭ್ಯಗಳನ್ನು ಒದಗಿಸಿ ಅವರ ಸಮಸ್ಯೆಗಳಿಗೆ ಸ್ಪಂದಿಸುವ ಸಂಸ್ಥೆಯಾಗುವಂತೆ ಶ್ರಮಿಸುವಂತೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕಿನ ನಿರ್ದೇಶಕ ಜಿ.ಡಿ. ಹರೀಶ್ಗೌಡ ಕರೆ ನೀಡಿದರು. ತಾಲೂಕಿನ ಹೆಗ್ಗಂದೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಶುಕ್ರವಾರ ನಡೆದ ನೂತನ ಎಂಸಿಡಿಸಿಸಿ ಬ್ಯಾಂಕಿನ ನಿರ್ದೇಶಕರ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿದ ಮಾತನಾಡಿದ ಅವರು, ಸಹಕಾರ ಸಂಘ ಕೇವಲ ಸಾಲ ನೀಡುವುದು, ವಸೂಲಾತಿ ಮಾಡುವುದೇ ಮುಖ್ಯವಲ್ಲ, ಸಹಕಾರ ಕ್ಷೇತ್ರದಿಂದ ಗ್ರಾಮಕ್ಕೆ ಬೇಕಾದ ಎಲ್ಲ ವ್ಯವಸ್ಥೆಯನ್ನು ಒಬ್ಬರಿಗೊಬ್ಬರು ಪರಸ್ಪರ ಸಹಾಯ ಮತ್ತು ಸಹಕಾರದಿಂದ ಸ್ಪಂದಿಸುವ ಮೂಲಕ ಆರ್ಥಿಕವಾಗಿ ಅಭಿವೃದ್ಧಿ ಹೊಂದಿದ್ದಾಗ ಮಾತ್ರ ರೈತರ ಜೀವನ ಮಟ್ಟ ಸುಧಾರಣೆಯಾಗಲು ಸಾಧ್ಯವಾಗುತ್ತದೆ ಹೇಳಿದರು.



ಜೀತವಿಮುಕ್ತರ ಅರ್ಜಿಯ ಬಗ್ಗೆ ಪರಿಶೀಲನೆ


ರಾವಂದೂರು: ತಾಲೂಕಿನಾದ್ಯಂತ ಜೀತವಿಮುಕ್ತರು ಸಲ್ಲಿಸಿರುವ ಅರ್ಜಿಗಳನ್ನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ, ಹಿರಿಯ ಅಧಿಕಾರಿಗಳಿಗೆ ವರದಿ ರವಾನಿಸಲಾಗುವುದು ಎಂದು ತಹಸೀಲ್ದಾರ್ ಎಂ.ಕೆ. ಸವಿತಾ ಹೇಳಿದರು. ಪಿರಿಯಾಪಟ್ಟಣ ತಾಲೂಕಿನ ಹಂಡಿತವಳ್ಳಿ ಗ್ರಾಮದಲ್ಲಿ ಜೀತವಿಮುಕ್ತರ ಅರ್ಜಿ ಪರಿಶೀಲಿಸಿದ ನಂತರ ಮಾತನಾಡಿದ ಅವರು, ತಾಲೂಕಿನಾದ್ಯಂತ 256 ಅರ್ಜಿ ಸಲ್ಲಿಸಿದ್ದು, ಇವುಗಳ ಸಮೀಕ್ಷೆಗಾಗಿ ಕಂದಾಯ, ಪಂಚಾಯತ್ ರಾಜ್ ಸೇರಿದಂತೆ ಕೆಲವು ಅಧಿಕಾರಿಗಳ ತಂಡ ರಚಿಸಿ, ಅರ್ಜಿಗಳ ಪರಿಶೀಲನೆ ನಡೆಸಲಾಗುತ್ತಿದೆ. ಜೀತವಿಮುಕ್ತರ ಅರ್ಜಿಗಳ ಮಾಹಿತಿಯಂತೆ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ ಎಂದು ತಿಳಿಸಿದರು. ತಾಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಕೆ. ರಾಜು, ಉಪತಹಸೀಲ್ದಾರ್ ಸಣ್ಣರಾಮಪ್ಪ, ಆರ್ಐ ಪುಟ್ಟಶೆಟ್ಟಿ, ಪಿಡಿಒ ಮಹದೇವ್ ಇದ್ದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement