ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ
ಮೈಸೂರು: ಕೇಂದ್ರ ಸರ್ಕಾರ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಇಲಾಖೆಯ ವೇತನ ಪರಿಷ್ಕರಣೆಯ ಆದೇಶವನ್ನು ವಿರೋಧಿಸಿ ಹಾಗೂ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವವರ ಸಂಬಳ ಹೆಚ್ಚಿಸುವಂತೆ ಆಗ್ರಹಿಸಿ ಆರೋಗ್ಯ ಇಲಾಖೆಯ ಅಡಿಯಲ್ಲಿ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಗುತ್ತಿಗೆ ನೌಕರರ ಸಂಘದಿಂದ ಅನಿರ್ದಿಷ್ಟಾವಧಿ ಧರಣಿ ನಡೆಸಲು ತೀರ್ಮಾನಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಂಡ ದಿನದಿಂದ ಇಂದಿನವರೆಗೂ 12 ಸಾವಿರ ಸಂಬಳ ನೀಡುತ್ತಿದ್ದಾರೆ. ಈಗ ಹೊರಬಿದ್ದಿರುವ ಆದೇಶದಿಂದ ಕೇವಲ 1 ಸಾವಿರ ಹೆಚ್ಚಿಸಲಾಗಿದೆ. ನೌಕರರ ಬಹುಕಾಲ ಸೇವೆಯನ್ನು ಪರಿಗಣಿಸಿ ಸಂಬಳ ನೀಡುವುದಾದಲ್ಲಿ 12 ಸಾವಿರದಿಂದ 20 ಸಾವಿರಕ್ಕೆ ಹೆಚ್ಚಿಸಬೇಕು ಎಂದು ಸಂಘದ ಅಧ್ಯಕ್ಷ ಅಣ್ಣಪ್ಪಸ್ವಾಮಿ ಶನಿವಾರ ಸುದ್ದಿಗೋಷ್ಠಿಯಲ್ಲಿ ದೂರಿದರು. ಪದಾಧಿಕಾರಿಗಳಾದ ಲೋಕೇಶ್, ನವೀನ್ ವಿಜಯ್, ಗೋಪಾಲ, ರಾಜೇಶ್, ರವಿ ಇದ್ದರು.