ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಉತ್ತಮ ಶಿಕ್ಷಣ: ನಟರಾಜು

Rashmi Kasaragodu
Updated On : 27 Jan 2014, 1:32 am

ಟಿ. ನರಸೀಪುರ: ಗ್ರಾಮೀಣ ಪ್ರದೇಶಗಳಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣವನ್ನು ಹಳ್ಳಿಗಾಡಿನ ಮಕ್ಕಳಿಗೆ ನೀಡುತ್ತಿವೆ ಎಂದು ಮೈಸೂರು ಮಹಾನಗರ ಪಾಲಿಕೆ ಸದಸ್ಯ ಬಿ.ಎಂ. ನಟರಾಜು ಹೇಳಿದರು.
ತಾಲೂಕಿನ ಸೋಸಲೆ ಗ್ರಾಮದಲ್ಲಿರುವ ಜ್ಞಾನೋದಯ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ನಗರ ಪ್ರದೇಶಗಳಲ್ಲಿ ಲಾಭದ ದೃಷ್ಟಿಯನ್ನಿಟ್ಟುಕೊಂಡು ಶಿಕ್ಷಣ ಸಂಸ್ಥೆಗಳನ್ನು ತೆರೆಯಲಾಗುತ್ತದೆ. ಹಳ್ಳಿಗಳ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲೆಂದು ಗ್ರಾಮೀಣ ಪ್ರದೇಶದಲ್ಲಿ ಖಾಸಗಿ ಶಾಲೆಗಳನ್ನು ಆರಂಭಿಸಲಾಗುತ್ತದೆ ಎಂದರು.
ಚೈನ್ನೈನ ಉಪನಿರ್ದೇಶಕ ಗುಣಶೇಖರ್ ಮಾತನಾಡಿ, ನರ್ಸಿಂಗ್ ವೃತ್ತಿ ಸೇವೆಯಲ್ಲಿ ನಿರತರಾದವರು ದೇವರನ್ನು ನೋಡಬಹುದು. ಹಳ್ಳಿಗಾಡಿನ ಹಿನ್ನೆಲೆಯಿರುವವರು ನರ್ಸಿಂಗ್ ತರಬೇತಿ ಪಡೆದುಕೊಳ್ಳಬೇಕು. ಪೋಷಕರು ಮಕ್ಕಳಿಗೆ ಹಣ ಸಂಪಾದನೆ ದಾರಿ ತೋರುವುದರ ಬದಲು ವಿದ್ಯಾವಂತರನ್ನಾಗಿ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಕೊಳ್ಳೇಗಾಲ ಮಾಜಿ ಶಾಸಕ ಎಸ್. ಬಾಲರಾಜ್, ಡಿಸಿಸಿ ಸದಸ್ಯ ಕೃಷ್ಣಕುಮಾರ್ ಸಾಗರ್, ಸಿ.ಜೆ. ಸ್ಯಾಮ್ಯುಲ್, ಜ್ಞಾನೋದಯ ಶಿಕ್ಷಣ ಸಂಸ್ಥೆ ಅಧ್ಯಕ್ಷೆ ಚಂದ್ರಮ್ಮ, ಕಾರ್ಯದರ್ಶಿ ಎಸ್. ಮೋಹನ್ರಾಜ್, ನರ್ಸಿಂಗ್ ಕಾಲೇಜು ಪ್ರಾಂಶುಪಾಲೆ ವಿಜಯಲಕ್ಷ್ಮೀ, ಛಾಯಾಗ್ರಾಹಕ ದಿಡ್ಡಿಹಳ್ಳಿ ರಘು, ಪ್ರೌಢಶಾಲೆ ಮುಖ್ಯ ಶಿಕ್ಷಕ ಜಿ. ವೆಂಕಟೇಶ್, ಶಿಕ್ಷಕರಾದ ಎಸ್. ಮಲ್ಲೇಶಪ್ಪ, ಜಗದೀಶಕುಮಾರ್, ಪ್ರೇಮಕುಮಾರಿ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement