ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಯುವಜನತೆ ಸಾಮಾಜಿಕ ಹೊಣೆಗಾರಿಕೆ ಅರಿಯಿರಿ'

Rashmi Kasaragodu
Updated On : 27 Jan 2014, 1:29 am

ಮೈಸೂರು: ಇಂದಿನ ಯುವಜನತೆ ಸಾಮಾಜಿಕ ಹೊಣೆಗಾರಿಕೆ ಅರಿಯಬೇಕು ಎಂದು ಎನ್ಸಿಸಿ ಗ್ರೂಪ್ ಕಮಾಂಡರ್ ರಾಜೇಶ್ವರ್ ಸಿಂಗ್ ಹೇಳಿದರು.
ಮಹಾಜನ ವಿದ್ಯಾಸಂಸ್ಥೆಗಳ ಸಮೂಹ ಆಯೋಜಿಸಿದ್ದ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ, ಪಥ ಸಂಚಲನದ ಗೌರವ ಸ್ವೀಕರಿಸಿ ಅವರು ಮಾತನಾಡಿದರು.
ದೇಶದ ಭವಿಷ್ಯ ಯುವಜನತೆ. ನೀವು ನಿಮ್ಮ ಸಾಮಾಜಿಕ ಹೊಣೆಗಾರಿಕೆ ಅರಿಯಬೇಕು ಮತ್ತು ದೇಶದೆಡೆಗೆ ತಮಗಿರುವ ಕರ್ತವ್ಯ ನೆನೆಯಬೇಕು. ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಹನೀಯರ ತ್ಯಾಗ ಮತ್ತು ಬಲಿದಾನ ಅರಿಯಬೇಕು ಎಂದು ತಿಳಿಸಿದರು. ಎನ್ಸಿಸಿ ತುಕಡಿಗಳು, ಎನ್ಎಸ್ಎಸ್ ಮತ್ತು ಇತರ ವಿದ್ಯಾರ್ಥಿಗಳ ತುಕಡಿಗಳಿಂದ ಪಥ ಸಂಚಲನ ನಡೆಯಿತು. ನಂತರ ವಿದ್ಯಾರ್ಥಿಗಳು ದೇಶ ಭಕ್ತಿ ಗೀತೆಗಳನ್ನು ಹಾಡಿದರು.
ಅಮೆರಿಕದ ಸ್ವಿವ್ ಲಿಂಚ್ ಮಾತನಾಡಿದರು. ಮಹಾಜನ ವಿದ್ಯಾಸಂಸ್ಥೆಯ ಅಧ್ಯಕ್ಷ ಶ್ರೀ ಆರ್.ವಾಸುದೇವ ಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಪ್ರೊ.ಕೆ.ವಿ. ಪ್ರಭಾಕರ ಸ್ವಾಗತಿಸಿದರು. ಮಹಾಜನ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಡಾ.ಸಿ.ಕೆ. ರೇಣುಕಾರ್ಯ ವಂದಿಸಿದರು. ಸಮಾರಂಭದ ಭಾಗವಾಗಿ ಶಸ್ತ್ರ ಕವಾಯತು, ದೇಶ ಭಕ್ತಿ ಸಾರುವ ಸಾಂಸ್ಕೃತಿಕ ಕಾರ್ಯಕ್ರಮ, ಸಾಂಪ್ರದಾಯಿಕ ಉಡುಗೆ ತೊಟ್ಟ  ವಿದ್ಯಾರ್ಥಿಗಳಿಂದ ಶುಭಾಶಯಗಳು, ವಿವಿಧ ಪ್ರದರ್ಶನ ಆಯೋಜಿಸಲಾಗಿತ್ತು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement