ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಆಸ್ತಿಗಾಗಿ ತಾಯಿಯನ್ನೇ ಕೊಂದ ದೂರ್ತ ಮಗ

Rashmi Kasaragodu
Updated On : 28 Jan 2014, 1:00 am

ಹುಣಸೂರು: ಆಸ್ತಿಗಾಗಿ ತಾಯಿಯನ್ನೇ ಕೊಂದು ವ್ಯಕ್ತಿಯೊಬ್ಬ ಪೊಲೀಸರ ಶರಣಾಗಿರುವ ಘಟನೆ ಕೂಡ್ಲೂರು ಲಕ್ಷ್ಮೀಪುರ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಜರುಗಿದೆ. ದಿವಂಗತ ಮಲ್ಲೇಶ್ ಎಂಬವರ ಪತ್ನಿ ಜಯಮ್ಮ (63) ಕೊಲೆಯಾದವರು. ಇವರಿಗೆ ಮೂವರು ಪುತ್ರರು ಇದ್ದು, ಎರಡನೇ ಪುತ್ರ ಸುರೇಶ ಎಂಬಾತ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ. ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ತಾಯಿ ಜಯಮ್ಮ ಅವರೊಂದಿಗೆ ಪದೇ ಪದೇ ಗಲಾಟೆಗಳು ನಡೆಯುತ್ತಿತ್ತು. ಸೋಮವಾರ ಮಧ್ಯಾಹ್ನ ಎರಡನೇ ಪುತ್ರ ಸುರೇಶ್ ಎಂಬಾತ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಸರ್ಕಲ್ ಇನ್ಸ್ಪೆಕ್ಟರ್ ಗಜೇಂದ್ರ ಪ್ರಸಾದ್, ಎಸ್ಐ ರಾಘವೇಂದ್ರ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement