ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ದಸಂಸ ಅಹೋರಾತ್ರಿ ಧರಣಿ ಮುಕ್ತಾಯ

Rashmi Kasaragodu
Updated On : 28 Jan 2014, 1:02 am

ಮೈಸೂರು: ಸಂವಿಧಾನ ದಿನದ ಅಂಗವಾಗಿ ಸಹಕಾರ ಕ್ಷೇತ್ರದಲ್ಲಿ ಮೀಸಲಾತಿಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯು ಜಿಲ್ಲಾಧಿಕಾರಿ ಕಚೇರಿ ಎದುರು ಹಮ್ಮಿಕೊಂಡಿದ್ದ ಅಹೋರಾತ್ರಿ ಧರಣಿಯು ಸೋಮವಾರ ಮುಕ್ತಾಯವಾಯಿತು.
ಸಹಕಾರ ಕ್ಷೇತ್ರದಲ್ಲಿ ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರಿಗೆ ಅವಕಾಶ ನೀಡದೆ ವಂಚನೆ ಮಾಡಲಾಗಿದೆ. ಈ ಕ್ಷೇತ್ರದಲ್ಲಿ ಕೇವಲ ಒಂದೇ ವರ್ಗ ಆವರಿಸಿಕೊಂಡಿದ್ದು, ಇವರ ಕಪಿಮುಷ್ಟಿಯಿಂದ ಬಿಡಿಸಿ ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರ ವರ್ಗಗಳಿಗೆ ಅವಕಾಶ ನೀಡುವ ಸಲುವಾಗಿ ಸಂವಿಧಾನ ಬದ್ಧ ಮೀಸಲಾತಿಯನ್ನು ಸರ್ಕಾರ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ದಸಂಸ ಜಿಲ್ಲಾ ಸಂಚಾಲಕ ದೇವಗಳ್ಳಿ ಸೋಮಶೇಖರ್, ಮುಖಂಡರಾದ ರಾಜಶೇಖರ ಕೋಟೆ, ಬೆಲವತ್ತ ರಾಮಚಂದ್ರ, ಆಲಗೂಡು ಶಿವಣ್ಣ, ಮಲ್ಲಹಳ್ಳಿ ನಾರಾಯಣ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement