ಕೇಂದ್ರದಲ್ಲಿ ಮತ್ತೆ ಕಾಂಗ್ರೆಸ್‌ಗೆ ಅಧಿಕಾರ
ಪಿರಿಯಾಪಟ್ಟಣ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವ ಮೂಲಕ ಯುಪಿಎ-3 ಸರ್ಕಾರ ರಚನೆಯಾಗಲಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಎಂ.ವೀರಪ್ಪ ಮೊಯ್ಲಿ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಗೆ ಮಂಗಳವಾರ ಭೇಟಿ ನೀಡಿ ಮಾತನಾಡಿದ ಅವರು, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬುನಾದಿ ಹಾಕಿಕೊಟ್ಟದ್ದು ಕಾಂಗ್ರೆಸ್ ಪಕ್ಷ. ದೇಶದಲ್ಲಿ ಆಡಳಿತ ನಡೆಸಿದ ಇತರೆ ಪಕ್ಷಗಳ ಸಾಧನೆ ಶೂನ್ಯವಾಗಿದೆ. ಕಾಂಗ್ರೆಸ್‌ನ ಕೊಡುಗೆ ದೇಶಕ್ಕೆ ಅಪಾರವಾಗಿದ್ದು, ಮುಂಬರುವ ಚುನಾವಣೆಯಲ್ಲಿ ಪಕ್ಷದ ಗೆಲುವು ಶತಸಿದ್ದ ಎಂದು ಹೇಳಿದರು.
ಯುವಕರಿಗೆ ಹೆಚ್ಚಿನ ಆದ್ಯತೆ ನೀಡುವುದರ ಮೂಲಕ ರಾಹುಲ್‌ಗಾಂಧಿ ಅವರು ಯುವಕರನ್ನು ತಮ್ಮತ್ತ ಸೆಳೆಯುವ ಕೆಲಸ ಮಾಡುತ್ತಿದ್ದಾರೆ. ಇದರಿಂದ ದೇಶದ ಆಂತರಿಕ ಭದ್ರತೆ ಹೆಚ್ಚಾಗುತ್ತದೆ ಎಂದು ತಿಳಿಸಿದರು. ಸಂಸದ ಎಚ್.ವಿಶ್ವನಾಥ್, ಶಾಸಕ ವಾಸು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾನ್ಸೂನ್‌ಚಂದ್ರು, ಕುಂಜಪ್ಪ ಕಾರ್ನಾಡ್, ಕೆಪಿಸಿಸಿ ಸದಸ್ಯ ಡಿ.ಟಿ. ಸ್ವಾಮಿ, ಜಿಪಂ ಮಾಜಿ ಸದಸ್ಯರಾದ ರಾಜಶೇಖರ್, ಜವರಪ್ಪ, ಪಪಂ ಸದಸ್ಯರಾದ ಅನಿತಾ, ಸುವರ್ಣ, ತ್ರಿನೇಶ್, ಸಣ್ಣಪ್ಪ, ಮುಖಂಡರಾದ ಡಾ.ಬಿ.ಜೆ. ವಿಜಯಕುಮಾರ್, ಅಣ್ಣಯ್ಯ, ಜಯಣ್ಣ, ಪಿ.ಮಹದೇವ್, ರಾಮು, ಬಿ.ಜೆ. ಬಸವರಾಜ್, ಮಹಮದ್‌ಷಫಿ, ಮಹದೇವ್, ಮಂಜು ಇದ್ದರು.