ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಉಪ ನೋಂದಣಾಧಿಕಾರಿ ಕಚೇರಿ ಮೇಲೆ ಲೋಕಾಯುಕ್ತರ ದಾಳಿ

Rashmi Kasaragodu
Updated On : 30 Jan 2014, 1:33 am

ಕ.ಪ್ರ. ವಾರ್ತೆ, ಮೈಸೂರು, ಜ.29
ಸರ್ಕಾರಿ ನಿಯಮ ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಉಪ ಲೋಕಾಯುಕ್ತ ನ್ಯಾ.ಸುಭಾಷ್ ಬಿ.ಅಡಿ ಅವರು ನಜರ್ಬಾದ್ನಲ್ಲಿರುವ ಉಪ ನೋಂದಣಾಧಿಕಾರಿ ಕಚೇರಿ ಮತ್ತು ಆಹಾರ ಇಲಾಖೆ ಕಚೇರಿಗಳ ಮೇಲೆ ಬುಧವಾರ ದಾಳಿ ನಡೆಸಿ ಪರಿಶೀಲಿಸಿದರು.
ಉಪ ಲೋಕಾಯುಕ್ತರು ದಾಳಿ ಹಿನ್ನೆಲೆಯಲ್ಲಿ ಗಾಬರಿಗೊಂಡ ಉಪ ನೋಂದಣಾಧಿಕಾರಿ ಕಚೇರಿಯ ಕೆಲವು ಸಿಬ್ಬಂದಿ ಕೆಲಸ ಬಿಟ್ಟು ಕಚೇರಿಯಿಂದ ಹೊರಗೆ ಓಡಿ ಹೋದರು. ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಲಾಗಿರುವ ಸಿಬ್ಬಂದಿಗೆ ಗುರುತಿನ ಪತ್ರ ನೀಡದಿರುವುದು ಕಂಡು ಬಂತು.
ಸಾರ್ವಜನಿಕರ ಆಸ್ತಿ ಸೇರಿದಂತೆ ಪ್ರಮುಖ ದಾಖಲೆ ಇರುವ ಕಚೇರಿಯಲ್ಲಿ ಬೇಕಾಬಿಟ್ಟಿ ಕೆಲಸ ನಡೆಯುತ್ತಿರುವುದನ್ನು ಗಮನಿಸಿದ ನ್ಯಾ.ಸುಭಾಷ್ ಅವರು, ಕೆಲವು ಕಡತಗಳನ್ನು ಮುಟ್ಟುಗೋಲು ಹಾಕಿಕೊಂಡರು. ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿದ್ದ ಮೈಸೂರು ಲೋಕಾಯುಕ್ತ ಎಸ್ಪಿ ಎಸ್.ಎಂ. ಜಗದೀಶ್ಪ್ರಸಾದ್ ಅವರಿಗೆ ಸೂಚಿಸಿದರು.
ಆಹಾರ ಇಲಾಖೆ: ನಂತರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಭೇಟಿ ನೀಡಿದ ಅವರು, ಅವಧಿ ಮೀರಿ ಸಿಬ್ಬಂದಿಯನ್ನು ದುಡಿಸುತ್ತಿರುವ ಆರೋಪ ಕೇಳಿ ಬಂತು. ಈ ಬಗ್ಗೆ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನು ಅವರು ವಿಚಾರಿಸಿದರು.
ಸರ್ಕಾರದ ನಿಯಮದಂತೆ ಕಾರ್ಯ ನಿರ್ವಹಿಸಬೇಕು. ಏನಾದರೂ ಅನಾಹುತವಾದಲ್ಲಿ ಅದಕ್ಕೆ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ನೌಕರರನ್ನು ಸಮಯ ಮೀರಿ ಕೆಲಸ ಮಾಡಿಸಬಾರದು. ಮುಂದೆ ಇಂತಹ ಆರೋಪ ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement