ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಫೆ.1, 2ರಂದು ಸಾಹಿತ್ಯ ಸಂಭ್ರಮ

Rashmi Kasaragodu
Updated On : 30 Jan 2014, 1:31 am

ಕ.ಪ್ರ.ವಾರ್ತೆ    ಮೈಸೂರು    ಜ. 29
ರಾಜವಂಶಸ್ಥ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಹಾಗೂ ರಾಷ್ಟ್ರಕವಿ ಡಾ.ಜಿ.ಎಸ್. ಶಿವರುದ್ರಪ್ಪ ಅವರ ಸ್ಮರಣಾರ್ಥವಾಗಿ ಫೆ.1 ಮತ್ತು 2 ರಂದು ನಟರಾಜ ಕಾಲೇಜು ಸಭಾಂಗಣದಲ್ಲಿ ಸಾಹಿತ್ಯ ಸಂಭ್ರಮ ಮತ್ತು ಜಾನಪದೋತ್ಸವ ಸಮ್ಮೇಳನ ಆಯೋಜಿಸಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಎಂ.ಚಂದ್ರಶೇಖರ್ ಹೇಳಿದರು.
ಭೂಮಿಕಾ ಬಳಗ, ಜಿಲ್ಲಾ ಕಸಾಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತವಾಗಿ ಈ ಸಮ್ಮೇಳನ ಆಯೋಜಿಸಿಸಲಾಗಿದೆ ಎಂದು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಫೆ.1ರ ಸಂಜೆ 4ಕ್ಕೆ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮತ್ತು ಡಾ.ಜಿ.ಎಸ್. ಶಿವರುದ್ರಪ್ಪ ಅವರ ಭಾವಚಿತ್ರಗಳ ಮರವಣಿಗೆ ಆಯೋಜಿಸಲಾಗಿದೆ. ಸಮ್ಮೇಳನಾಧ್ಯಕ್ಷೆ ಡಾ.ಎನ್.ಕೆ. ಲೋಲಾಕ್ಷಿ ಅವರು ಮೆರವಣಿಗೆಯಲ್ಲಿ ಭಾಗವಹಿಸುವರು.
ಬಸವ ಪುತ್ಥಳಿಯಿಂದ ಆರಂಭವಾಗುವ ಮೆರವಣಿಗೆಯು ಬಸವೇಶ್ವರ ವೃತ್ತ, ಮಾಧವರಾವ್ ವೃತ್ತ, ವಾಣಿವಿಲಾಸ ರಸ್ತೆಯ ಮೂಲಕ ನಟರಾಜ ಕಾಲೇಜು ಸಭಾಂಗಣಕ್ಕೆ ತಲುಪಲಿದೆ ಎಂದರು. ಸಂಜೆ 5ಕ್ಕೆ ಮೇಯರ್ ಎನ್.ಎಂ. ರಾಜೇಶ್ವರಿ ಅವರು ಸಮ್ಮೇಳನ ಉದ್ಘಾಟಿಸುವರು. ಬೇಬಿ ಬೆಟ್ಟದ ರಾಮಯೋಗೀಶ್ವರ ಮಠದ ಸದಾಶಿವ ಸ್ವಾಮೀಜಿ, ಮೇಲುಕೋಟೆಯ ಇಳೈ ಆಳ್ವಾರ್ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಕೆ.ಜಿ. ಕೊಪ್ಪಲಿನ ಚಂದ್ರಮೌಳೇಶ್ವರ ದೇವಸ್ಥಾನ ಟ್ರಸ್ಟ್ನ ಅಧ್ಯಕ್ಷ ಕೆ. ಹರೀಶ್ಗೌಡ ಅಧ್ಯಕ್ಷತೆ ವಹಿಸುವರು ಎಂದು ಅವರು ಹೇಳಿದರು.
ಬಳಿಕ ಮೊದಲ ಗೋಷ್ಠಿ ನಡೆಯಲ್ಲಿದ್ದು, ಇದೇ ವೇಳೆ ಸಮ್ಮೇಳನದ ಗೌರವಾಧ್ಯಕ್ಷ ಬೆಳವಾಡಿ ಮಹದೇವು, ಎಂಡಿಸಿಸಿ ಬ್ಯಾಂಕ್ನ ನಿರ್ದೇಶಕ ಜಿ.ಡಿ. ಹರೀಶ್ಗೌಡ, ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆ ಅಧ್ಯಕ್ಷೆ ಯಮುನಾ ಅವರನ್ನು ಸನ್ಮಾನಿಸಲಾಗುವುದು. ಅಲ್ಲದೆ, ಹಲವು ಸಾಧಕರಿಗೆ ಭೂಮಿಕಾ ಸೇವಾಸಿರಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.
ಫೆ.2ರ ಮಧ್ಯಾಹ್ನ 2.30ಕ್ಕೆ ಉದಯೋನ್ಮುಖ ಸಾಹಿತಿಗಳ ಕವಿಗೋಷ್ಠಿ ನಡೆಯಲಿದೆ. ಸಂಜೆ 5ಕ್ಕೆ ಸಭಾ ಕಾರ್ಯಕ್ರಮವನ್ನು ಮಾಜಿ ಸಚಿವ ಎಸ್.ಎ. ರಾಮದಾಸ್ ಉದ್ಘಾಟಿಸುವರು. ಚಿದಾನಂದ ಸ್ವಾಮೀಜಿ, ಸ್ವತಂತ್ರ ಬಸವಲಿಂಗ ಶಿವಯೋಗಿ ಸ್ವಾಮೀಜಿ, ಮಾತಾ ಬಸವಾಂಜಲಿ, ಭಾಷ್ಯಂ ಭಾಗವಹಿಸುವರು. ನಂತರ ದ್ವಿತೀಯ ಗೋಷ್ಠಿ ನಡೆಯಲಿದೆ. ಇದೇ ವೇಳೆ ಅಭಿನಯ ಕಲಾಧರೆ ಪ್ರಶಸ್ತಿಯನ್ನು ಡಾ. ಭಾರತಿ ವಿಷ್ಣುವರ್ಧನ್ ಅವರಿಗೆ ಪ್ರದಾನ ಮಾಡಲಾಗುವುದು ಎಂದು ಅವರು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement