ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಬೇಡಿಕೆ ಈಡೇರಿಕೆಗಾಗಿ ಬಿಜೆಪಿ ರೈತ ಮೋರ್ಚಾ ಧರಣಿ

Rashmi Kasaragodu
Updated On : 31 Jan 2014, 1:13 am

ಮೈಸೂರು: ರೈತ ಅಧಿಕಾರ ದಿನದ ಅಂಗವಾಗಿ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ಜಿಲ್ಲಾ ಘಟಕದವರು ಗುರುವಾರ ಪ್ರತಿಭಟಿಸಿದರು.
ನಗರದ ಗಾಂಧಿ ಚೌಕದಲ್ಲಿ ಪ್ರತಿಭಟಿಸಿದ ರೈತ ಮೋರ್ಚಾದವರು ನಂತರ ಜಿಲ್ಲಾಧಿಕಾರಿ ಕಚೇರಿಗೆ ತಲುಪಿ ತಮ್ಮ ಮನವಿ ಸಲ್ಲಿಸಿದರು.
ಸ್ವಾಮಿನಾಥನ್ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ಅವೈಜ್ಞಾನಿಕವಾಗಿ ಏರಿಸಿರುವ ರಸಗೊಬ್ಬರ ಬೆಲೆ ಇಳಿಸಬೇಕು. ಕಬ್ಬಿಗೆ ರಾಜ್ಯ ಸರ್ಕಾರವು ಬೆಂಬಲ ಬೆಲೆ ನೀಡಿದೆ. ಅದೇ ರೀತಿ ರೈತರು ಬೆಳೆದ ಕಬ್ಬು, ಬತ್ತ, ತೊಗರಿ, ಜೋಳ, ಹತ್ತಿ, ತಂಬಾಕು ಬೆಳೆಗಳಿಗೆ ಸಮರ್ಪಕವಾದ ಬೆಲೆ ನಿಗದಿ ಮಾಡಿ ರೈತರ ಕಷ್ಟಕ್ಕೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.
ಸಹಕಾರ ಸಂಘಗಳಿಗೆ ಹಣ ಬಿಡುಗಡೆಗೊಳಿಸಬೇಕು. ಹಣ ನೀಡಿದರೆ ಮಾತ್ರ ಪಂಪ್ಸೆಟ್ಗಳಿಗೆ ವಿದ್ಯುತ್ ನೀಡುವುದನ್ನು ನಿಲ್ಲಿಸಬೇಕು. ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ ಪುನಾರಂಭಿಸಬೇಕು. ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಲ್ಲಿ ರೈತರು ವೇಬ್ರಿಡ್ಜ್ ನಿರ್ಮಾಣಕ್ಕೆ ಅವಕಾಶ ನೀಡಬೇಕು. ಹಾಗೂ ಕಾರ್ಖಾನೆಯಿಂದ ರೈತರು ಬೆಳೆದಂತ ಕಬ್ಬಿಗೆ ಸೂಕ್ತ ಬೆಲೆ ಕೊಡಿಸಬೇಕು ಎಂದು ಅವರು ಆಗ್ರಹಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಹೇಮಂತ್ಕುಮಾರ್ಗೌಡ, ಎಸ್.ಡಿ. ಮಹೇಂದ್ರ, ಮಿರ್ಲೆ ಶ್ರೀನಿವಾಸಗೌಡ, ಸುರೇಶ್ಬಾಬು, ದೇವರಾಜ್, ಗುರುಪಾದಸ್ವಾಮಿ, ಜಗನ್ನಾಥ್, ಕುಮಾರಸ್ವಾಮಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement