ಅನುದಾನಿತ ಶಾಲೆಗೂ ಬಿಸಿಯೂಟ
ಪಿರಿಯಾಪಟ್ಟಣ: ಸ್ವಚ್ಛ ಪರಿಸರವಿದ್ದಾಗ ಮಾತ್ರ ಆರೋಗ್ಯವಂತ ಸಮಾಜವನ್ನು ಕಾಣಲು ಸಾಧ್ಯ ಎಂದು ಶಿಕ್ಷಣ ಸಂಯೋಜಕ ಶಿವಣ್ಣ ಹೇಳಿದರು.
ತಾಲೂಕಿನ ಕಂಪಲಾಪುರ ಗ್ರಾಮದ ನಾಗಾ ಹಿರಿಯ ಪ್ರಾಥಮಿಕ ಅನುದಾನಿತ ಶಾಲೆಯ ವಿದ್ಯಾರ್ಥಿಗಳಿಗೆ ಬಿಸಿಯೂಟ ಬಡಿಸುವ ಮೂಲಕ ಅನುದಾನಿತ ಶಾಲೆಗಳ ಬಿಸಿಯೂಟ ಯೋಜನೆಗೆ ಚಾಲನೆ ನೀಡಿ ಮಾತಾಡಿದ ಅವರು, ದಾಸೋಹಗಲ ಬಗ್ಗೆ ಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿ ಎಚ್ಚರಿಕೆ ವಹಿಸಬೇಕು ಶುಚಿತ್ವವನ್ನು ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.ಸಿಆರ್ಪಿ ಬಲರಾಮ್, ಸಂಸ್ಥೆ ಕಾರ್ಯದರ್ಶಿ ಕೆ.ವಿ. ಜಯರಾಂ, ಮುಖ್ಯ ಶಿಕ್ಷಕ ಚಂದ್ರಶೇಖರ್, ದೈಹಿಕ ಶಿಕ್ಷಕ ಸ್ವಾಮಿಗೌಡ, ಗಿರೀಶ್, ನಟರಾಜ್ ಇದ್ದರು.