ಹೈನುಗಾರಿಕೆಯಿಂದ ಆರ್ಥಿಕ ಸ್ವಾವಲಂಬನೆ
ಎಚ್.ಡಿ. ಕೋಟೆ: ಪ್ರತಿಯೊಬ್ಬ ಕೃಷಿಕರೂ ತಮ್ಮ ಮನೆಗಳಲ್ಲಿ ಹೈನುಗಾರಿಕೆ ಮಾಡುವುದರಿಂದ ಆರ್ಥಿಕವಾಗಿ ಮುಂದೆ ಬರಲು ಸಹಕಾರಿಯಾಗುತ್ತದೆ ಎಂದು ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕ ಮಹಾಬಲ ಕುಲಾಲ್ ಹೇಳಿದರು.
ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಮತ್ತು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ನಡೆದ ಇತರೆ ಪಶು ಸಂಗೋಪನಾ ವಿಚಾರ ಸಂಕಿರಣ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಕೃಷಿಗೆ ಪೂರಕವಾದ ಹಸು, ಆಡು, ಕುರಿ ಸೇರಿದಂತೆ ಇತರೆ ಸಾಕು ಪ್ರಾಣಿಗಳನ್ನು ಸಾಕುವುದರಿಂದ ಕೃಷಿಕರು ಆರ್ಥಿಕವಾಗಿ ಸಬಲರಾಗಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಸಹಾಯಕ ನಿರ್ದೇಶಕ ಡಾ.ಎ.ಯು.ಕುಶಾಲಪ್ಪ, ಗ್ರಾಪಂ ಮಾಜಿ ಅಧ್ಯಕ್ಷ ಗೋವಿಂದರಾಜು, ತಾಲೂಕು ಯೋಜನಾಧಿಕಾರಿ ಉಮಾರಬ್ಬ, ಸತೀಶ್, ಸಂಪನ್ಮೂಲ ವ್ಯಕ್ತಿಗಳಾದ ಡಾ.ಕೆ.ಆರ್. ರಮೇಶ್, ಡಾ.ಸಿ. ಪ್ರಕಾಶ್, ಗಣೇಶ್, ಸದಾಶಿವನಾಯಕ್, ಜಿ.ಕೆ. ಮಹೇಶ್ ಇದ್ದರು.