ಮಂಚೇಗೌಡನಕೊಪ್ಪಲಿನಲ್ಲಿ ಪ್ರತಿಭಾ ಪುರಸ್ಕಾರ
ಮೈಸೂರು: ನಗರದ ಮಂಚೇಗೌಡನ ಕೊಪ್ಪಲಿನ ಕೀರ್ತಿ ಯುವತಿ ಮಹಿಳಾ ಮಂಡಳಿ ಮತ್ತು ಸಿರಿಗನ್ನಡ ವೇದಿಕೆ ಮಹಿಳಾ ಘಟಕದ ವತಿಯಿಂದ 5ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು.
ಇಳೈ ಆಳ್ವಾರ್ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಜಿ.ಡಿ. ಹರೀಶ್ಗೌಡ ಕಾರ್ಯಕ್ರಮ ಉದ್ಘಾಟಿಸಿದರು. ಮೆಹುಲ್ ಜೆ.ಪಟೇಲ್ ಅಧ್ಯಕ್ಷತೆ ವಹಿಸಿದ್ದರು. ಮಂಜುಳ ರಮೇಶ್ ಪ್ರಾಸ್ತಾವಿಕ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಎಂ.ಎನ್.ನಟರಾಜು, ರೇಖಾ ನೇಟ್, ವಿ.ಭುವನೇಶ್ವರಿ, ಪೋತೇರು ಮಹದೇವು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ನೂತನ ಅಧ್ಯಕ್ಷೆ ಮಂಜುಳಾ ಮಾನಸ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಛಾಯಿತು. ಸಂಘದ ಪದಾಧಿಕಾರಿಗಳಾದ ಮಂಜುಳಾ ರಮೇಶ್, ಎಸ್. ನಾಗರತ್ನ, ಪದ್ಮಾವತಿ, ಹರಿಣಿ ಎಂ. ಯಶೋಧ, ದಾಕ್ಷಾಯಿಣಿ, ಗಾಯತ್ರಿ, ಮಂಗಳಾ ಹಾಗೂ ಸ್ತ್ರೀಶಕ್ತಿ ಸ್ವ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.